ನವದೆಹಲಿ: ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.
ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂದೆ ನೀಡಿದ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ರದ್ದು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ದೆಹಲಿ ಪೊಲೀಸರು ಹೇಳಿದ್ದಾರೆ. ಲೈಂಗಿಕ ಕಿರುಕುಳ ಮತ್ತು ಬೆಂಬಿಡದೆ ಹಿಂಬಾಲಿಸಿಕೊಂಡು ಕಿರುಕುಳ ನೀಡುವ ಆರೋಪಗಳಿಗೆ ಸಂಬಂಧಪಟ್ಟಂತೆ ಬ್ರಿಜ್ ಭೂಷಣ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.
ಅಪ್ರಾಪ್ತ ಬಾಲಕಿ ಆರೋಪದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸ್ ವರದಿ ಹೇಳಿದೆ. ನ್ಯಾಯಾಲಯವು ಈ ಬಗ್ಗೆ ಜುಲೈ 4ರಂದು ಮುಂದಿನ ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.
ಕಳೆದ ಏಪ್ರಿಲ್ 28 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.
ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಸಿಂಗ್, ತನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೂ ನೇಣು ಹಾಕಿಕೊಳ್ಳುವುದಾಗಿ ಈ ಹಿಂದೆ ಹೇಳಿಕೊಂಡಿದ್ದರು.
ಏಳು ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21 ರಂದು WFI ಮುಖ್ಯಸ್ಥರ ವಿರುದ್ಧ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಪೊಲೀಸರು ಏಪ್ರಿಲ್ 28 ರಂದು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಅವರನ್ನು ಬಂಧಿಸದಿದ್ದರೆ ಅವರು ತಮ್ಮ ಪ್ರತಿಭಟನೆಯನ್ನು ಮತ್ತೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಐಪಿಸಿಯ ಸಂಬಂಧಿತ ಸೆಕ್ಷನ್‌ಗಳೊಂದಿಗೆ ಪೋಕ್ಸೊ ಕಾಯ್ದೆಯಡಿ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಕ ಬಾಲಕಿಯ ಆರೋಪದ ಆಧಾರದ ಮೇಲೆ ಅದನ್ನು ದಾಖಲಿಸಲಾಗಿದೆ. ನಮ್ರತೆಯ ಉಲ್ಲಂಘನೆಗೆ ಸಂಬಂಧಿಸಿದ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕುಸ್ತಿಪಟುಗಳು ದಾಖಲಿಸಿದ ದೂರುಗಳ ಆಧಾರದ ಮೇಲೆ ಭೂಷಣ್ ಸಿಂಗ್ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ.
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ತಮ್ಮ ಮಾತುಕತೆಯ ಸಂದರ್ಭದಲ್ಲಿ ಜೂನ್ 15 ರೊಳಗೆ ಪ್ರಕರಣದ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…