ದುಬೈ: ಏಕದಿನ ಕ್ರಿಕೆಟ್ ಮಾದರಿಯಿಂದ ಸದ್ಯಕ್ಕೆ ನಾನು ನಿವೃತ್ತಿಯಾಗುವುದಿಲ್ಲ. ಅದರ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ವೈಫಲ್ಯದಿಂದ ರೋಹಿತ್ ಶರ್ಮಾ ಅವರ ಕ್ರಿಕೆಟ್ ನಿವೃತ್ತಿಯ ಕುರಿತು ವದಂತಿಗಳು ಹರಿದಾಡಿದ್ದವು.
ಆದರೆ, ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದ ನಂತರ ಈ ಎಲ್ಲಾ ಉಹಾಪೋಹಾಗಳಿಗೂ ಅಂತಿಮ ತೆರೆ ಎಳೆದಿದ್ದಾರೆ.
ಫೈನಲ್ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ನಂತರ ಮಾತನಾಡಿದ ರೋಹಿತ್, ಏಕದಿನ ಕ್ರಿಕೆಟ್ ಮಾದರಿಯಿಂದ ಈಗಲೇ ನಿವೃತ್ತಿಯಾಗುವುದಿಲ್ಲ. ದಯವಿಟ್ಟು ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ. ಭವಿಷ್ಯದ ಯೋಜನೆಗಳೇನೂ ಇಲ್ಲ. ಎಲ್ಲವೂ ಹೀಗೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.





