ಕ್ರೀಡೆ

ಏಕದಿನ ಕ್ರಿಕೆಟ್‌ ನಿವೃತ್ತಿಯ ಬಗ್ಗೆ ಯೋಚನೆ ಇಲ್ಲ: ರೋಹಿತ್‌ ಶರ್ಮಾ

ದುಬೈ: ಏಕದಿನ ಕ್ರಿಕೆಟ್‌ ಮಾದರಿಯಿಂದ ಸದ್ಯಕ್ಕೆ ನಾನು ನಿವೃತ್ತಿಯಾಗುವುದಿಲ್ಲ. ಅದರ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ ಎಂದು ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ವೈಫಲ್ಯದಿಂದ ರೋಹಿತ್‌ ಶರ್ಮಾ ಅವರ ಕ್ರಿಕೆಟ್‌ ನಿವೃತ್ತಿಯ ಕುರಿತು ವದಂತಿಗಳು ಹರಿದಾಡಿದ್ದವು.

ಆದರೆ, ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದ ನಂತರ ಈ ಎಲ್ಲಾ ಉಹಾಪೋಹಾಗಳಿಗೂ ಅಂತಿಮ ತೆರೆ ಎಳೆದಿದ್ದಾರೆ.

ಫೈನಲ್‌ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ನಂತರ ಮಾತನಾಡಿದ ರೋಹಿತ್‌, ಏಕದಿನ ಕ್ರಿಕೆಟ್‌ ಮಾದರಿಯಿಂದ ಈಗಲೇ ನಿವೃತ್ತಿಯಾಗುವುದಿಲ್ಲ. ದಯವಿಟ್ಟು ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ. ಭವಿಷ್ಯದ ಯೋಜನೆಗಳೇನೂ ಇಲ್ಲ. ಎಲ್ಲವೂ ಹೀಗೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

AddThis Website Tools
ಆಂದೋಲನ ಡೆಸ್ಕ್

Recent Posts

ಕಾರ್ಮಿಕ ಇಲಾಖೆಯ ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ಬಿಜೆಪಿ ಆರೋಪ

ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…

4 mins ago

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌…

22 mins ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…

26 mins ago

ಪ್ರತಾಪ್‌ ಸಿಂಹನ ಮಾತು ಹಾಗೂ ನಾಲಿಗೆ ಸ್ವಲ್ಪ ಸರಿಯಿಲ್ಲ: ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ. ರಾಜ್ಯ…

52 mins ago

ತುರ್ತು ಸಭೆ: ಹಾವಳಿ ನೀಡುತ್ತಿರುವ ಪುಂಡಾನೆಗಳ ಸೆರೆಗೆ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…

59 mins ago

ಗುಂಡ್ಲಪೇಟೆ: ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…

1 hour ago