ನವದೆಹಲಿ: ಇದೇ ಜೂನ್ 1 ರಿಂದ ಆರಂಭವಾಗಲಿರುವ ಟಿ20 worldcup ನಲ್ಲಿ ಸ್ಪರ್ಧಿಸಲಿರುವ ಅಮೇರಿಕಾ ತಂಡದಲ್ಲಿ ಕನ್ನಡಿಗನೊಬ್ಬ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್ ಕೆಂಜಿಗೆ ಅವರ ಪುತ್ರ ನಾಸ್ತುಷ್ ಕೆಂಜಿಗೆ ಅವರು ಅಮೇರಿಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇವರನ್ನು ಒಳಗೊಂಡಂತೆ ಅಮೇರಿಕಾ ತಂಡ ನಾಯಕನೂ ಸಹಾ ಭಾರತೀಯರೇ ಆಗಿದ್ದಾರೆ. ವಿಶ್ವಕಪ್‌ನಲ್ಲಿ ಅಮೇರಿಕಾ ತಂಡದ ಸಾರಥ್ಯವನ್ನು ಮೊನಾಂಕ್ ಪಟೇಲ್ ವಹಿಸಲಿದ್ದಾರೆ. ಉಳಿದಂತೆ ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲೀಂದ್ ಕುಮಾರ್, ನಿತೀಶ್ ಕುಮಾರ್, ಸೌರಭ್ ನೇತ್ರಾವಲ್ಕರ್ ಎಲ್ಲರೂ ಭಾರತೀಯು ಮೂಲದವರೇ ಆಗಿದ್ದಾರೆ.
ನ್ಯೂಜಿಲೆಂಡ್ ಆಲ್‌ರೌಂಡರ್‌ಗೆ ಅಮೇರಿಕಾ ತಂಡದಲ್ಲಿ ಅವಕಾಶ: ನ್ಯೂಜಿಲೆಂಡ್ ಪರವಾಗಿ ಅಂತರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿದ್ದ ಕೋರಿ ಆಂಡರ್‌ಸನ್ ಅವರು ಈ ಬಾರಿ ಅಮೇರಿಕಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆಂಡರ್ಸನ್ ಅಂತರಾಷ್ಟ್ರೀಯ ಟಿ20 ಯಲ್ಲಿ ಈವರೆಗೆ 33 ಪಂದ್ಯಗಳನ್ನು ಆಡಿದ್ದು, 568 ರನ್ ಗಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…