ಬೆಂಗಳೂರು: ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಹಲವು ಮ್ಯಾಚ್ ಫಿನಿಷಿಂಗ್ ಇನಿಂಗ್ಸ್‌ಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಗೆಲ್ಲಿಸಿದ್ದ ದಿನೇಶ್ ಕಾರ್ತಿಕ್, ಪ್ರಸಕ್ತ ಆವೃತ್ತಿಯಲ್ಲಿ ವೈಫಲ್ಯ ಅನುಭವಿಸುವ ಮೂಲಕ ಟೀಕೆಗಳಿಗೆ ಗುರಿಯಾಗಿದ್ದಾರೆ.
ಭಾನುವಾರ ಗುಜರಾತ್ ಟೈಟನ್ಸ್ ವಿರುದ್ಧ ನಾಲ್ಕನೇ ಬಾರಿ ಡಕ್‌ಔಟ್ ಆದರು. ಆ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಡಕ್‌ಔಟ್ ಆಗುವ ಮೂಲಕ ಅನಗತ್ಯ ದಾಖಲೆಯನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯ ಆರ್‌ಸಿಬಿಗೆ ಅತ್ಯಂತ ನಿರ್ಣಾಯಕವಾಗಿತ್ತು. ಐಪಿಎಲ್ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಗುಜರಾತ್ ವಿರುದ್ದ ಗೆಲುವು ಅಗತ್ಯವಿತ್ತು. ಆದರೆ, ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುವಂತಾದ ಆರ್‌ಸಿಬಿ ಪರ ಇನ್‌ಫಾರ್ಮ್ ಬ್ಯಾಟರ್‌ಗಳಾದ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಬೇಗ ವಿಕೆಟ್ ಒಪ್ಪಿಸಿದ್ದರು. ಆರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದಿದ್ದ ದಿನೇಶ್ ಕಾರ್ತಿಕ್ ಎದುರಿಸಿದ ಮೊಟ್ಟ ಮೊದಲ ಎಸೆತದಲ್ಲಿಯೇ ಯಶ್ ದಯಾಳ್ ಎಸೆತದಲ್ಲಿ ವಿಕೆಟ್ ಕೀಪರ್ ವೃದ್ದಿಮಾನ್ ಸಹಾಗೆ ಕ್ಯಾಚಿತ್ತು ನಿರ್ಗಮಿಸಿದರು.
ಗುಜರಾತ್ ವಿರುದ್ದ ಡಕ್‌ಔಟ್ ಆಗುವ ಮೂಲಕ ದಿನೇಶ್ ಕಾರ್ತಿಕ್ ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ನಾಲ್ಕನೇ ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದಂತಾಯಿತು. ಆ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಜೋಸ್ ಬಟ್ಲರ್ (4 ಡಕ್‌ಔಟ್) ಅವರ ಅನಗತ್ಯ ದಾಖಲೆಯನ್ನು ಆರ್‌ಸಿಬಿ ವಿಕೆಟ್ ಕೀಪರ್ ಸರಿದೂಗಿಸಿದರು.
ಗುಜರಾತ್ ವಿರುದ್ದ ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ದಿನೇಶ್ ಕಾರ್ತಿಕ್ ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ 17ನೇ ಬಾರಿ ಡಕ್‌ಔಟ್ ಆದರು. ಆ ಮೂಲಕ 16 ಬಾರಿ ಡಕ್‌ಔಟ್ ಆಗಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರ ಅನಗತ್ಯ ದಾಖಲೆಯನ್ನು ಮುರಿದಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಡಕ್‌ಔಟ್ ಆದ ಕುಖ್ಯಾತಿಗೆ ದಿನೇಶ್ ಕಾರ್ತಿಕ್ ಭಾಜನರಾಗಿದ್ದಾರೆ.
1. ದಿನೇಶ್ ಕಾರ್ತಿಕ್-17
2. ರೋಹಿತ್ ಶರ್ಮಾ-16
3. ಸುನೀಲ್ ನರೈನ್-15
4. ಮಂದೀಪ್ ಸಿಂಗ್-15
5.ಮನೀಷ್ ಪಾಡೆ-14
6. ಗ್ಲೆನ್ ಮ್ಯಾಕ್ಸ್‌ವೆಲ್-14
7. ಅಂಬಾಟಿ ರಾಯುಡು-14
8.ರಶೀದ್ ಖಾನ್-13
9.ಪಿಯೂಷ್ ಚಾವ್ಲಾ-13
2023ರ ಐಪಿಲ್ ಟೂರ್ನಿಯಲ್ಲಿ ಕಳಪೆ ಫಾರ್ಮ್: 2022ರ ಐಪಿಎಲ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ ದಿನೇಶ್ ಕಾರ್ತಿಕ್, ಸುದೀರ್ಘ ಅವಧಿಯ ಬಳಿಕ ಭಾರತ ಟಿ20 ತಂಡಕ್ಕೆ ಲಗ್ಗೆ ಇಟ್ಟಿದ್ದರು. ಆದರೆ, 2023ರ ಐಪಿಎಲ್ ಟೂರ್ನಿಯಲ್ಲಿ ತಮಿಳುನಾಡು ಮೂಲದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸತತ ವೈಫಲ್ಯ ಅನುಭವಿಸಿದ್ದಾರೆ. ನಾಲ್ಕು ಬಾರಿ ಡಕ್‌ಔಟ್ ಜೊತೆಗೆ ಆಡಿದ 13 ಇನಿಂಗ್ಸ್‌ಗಳಿಂದ 11.67ರ ಸರಾಸರಿಯಲ್ಲಿ ಕೇವಲ 140 ರನ್ ಗಳಿಸಿದ್ದಾರೆ. ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಷಿರ್ ಆಗಿ ವೈಫಲ್ಯ ಅನುಭವಿಸಿದ ಕಾರಣ ಕೂಡ ಆರ್‌ಸಿಬಿ ಹಲವು ಪಂದ್ಯಗಳಲ್ಲಿ ಸೋಲಲು ಕಾರಣವಾಗಿದೆ ಎಂದರೆ ತಪ್ಪಾಗಲಾರದು.
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…