ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್‌ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್ 46.5 ಓವರ್‌ಗಳಲ್ಲಿ 4 ವಿಕೆಟಿಗೆ 269 ರನ್ ಬಾರಿಸಿ ಜಯ ಸಾಧಿಸಿತು.
ಆರಂಭಕಾರ ಇಬ್ರಾಹಿಂ ಜದ್ರಾನ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಅಫ್ಘಾನ್‌ನ ಯಶಸ್ವಿ ಚೇಸಿಂಗ್‌ನಲ್ಲಿ ಮಹತ್ವದ ಪಾತ್ರ ವಹಿಸಿತು. ಭರ್ತಿ 30 ಓವರ್‌ಗಳ ತನಕ ಕ್ರೀಸ್ ಆಕ್ರಮಿಸಿಕೊಂಡ ಜದ್ರಾನ್ ಶತಕಕ್ಕೆ ಕೇವಲ 2 ರನ್ ಅಗತ್ಯವಿದ್ದಾಗ ಔಟಾದರು. ಅವರು ಎಸೆತಕ್ಕೊಂದರಂತೆ 98 ರನ್ ಬಾರಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ, 2 ಸಿಕ್ಸರ್ ಸೇರಿತ್ತು.
ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳೂ ಲಂಕಾ ದಾಳಿಯನ್ನು ದಿಟ್ಟ ರೀತಿಯಲ್ಲಿ ಎದುರಿಸಿದರು. ರೆಹಮತ್ ಶಾ 55, ನಾಯಕ ಹಶ್ಮತುಲ್ಲ ಶಾಹಿದಿ 38, ಮೊಹಮ್ಮದ್ ನಬಿ ಔಟಾಗದೆ 27 ರನ್ ಹೊಡೆದರು. ಜದ್ರಾನ್-ರೆಹಮತ್ ಜೋಡಿ ದ್ವಿತೀಯ ವಿಕೆಟಿಗೆ 146 ರನ್ ಸೇರಿಸಿ ಲಂಕಾ ಬೌಲರ್‌ಗಳಿಗೆ ಬೆವರಿಳಿಸಿದರು.
ಶ್ರಿಲಂಕಾ ಅಗ್ರ ಕ್ರಮಾಂಕದ ಕುಸಿತಕ್ಕೆ ಸಿಲುಕಿತು. 84ಕ್ಕೆ 4 ವಿಕೆಟ್ ಬಿತ್ತು. ಆದರೆ 5ನೇ ವಿಕೆಟಿಗೆ ಜತೆಗೂಡಿದ ಚರಿತ ಅಸಲಂಕ (91) ಮತ್ತು ಧನಂಜಯ ಡಿ ಸಿಲ್ವ (51) ಸೇರಿಕೊಂಡು ಹೋರಾಟವನ್ನು ಜಾರಿಯಲ್ಲಿರಿಸಿದರು.
ಅಫ್ಘಾನ್ ಪರ ಬೌಲಿಂಗ್ ದಾಳಿಗಿಳಿದ ಎಲ್ಲ 6 ಮಂದಿ ವಿಕೆಟ್ ಉರುಳಿಸಲು ಯಶಸ್ವಿಯಾದರು.
ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…
ವೈಡ್ ಆಂಗಲ್ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ…
ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…