ಕ್ರೀಡೆ

ಏಕದಿನ ಪಂದ್ಯ: ಲಂಕೆಯನ್ನು ಮಣಿಸಿದ ಅಫ್ಘಾನ್‌

ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್‌ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್‌ 46.5 ಓವರ್‌ಗಳಲ್ಲಿ 4 ವಿಕೆಟಿಗೆ 269 ರನ್‌ ಬಾರಿಸಿ ಜಯ ಸಾಧಿಸಿತು.
ಆರಂಭಕಾರ ಇಬ್ರಾಹಿಂ ಜದ್ರಾನ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ಅಫ್ಘಾನ್‌ನ ಯಶಸ್ವಿ ಚೇಸಿಂಗ್‌ನಲ್ಲಿ ಮಹತ್ವದ ಪಾತ್ರ ವಹಿಸಿತು. ಭರ್ತಿ 30 ಓವರ್‌ಗಳ ತನಕ ಕ್ರೀಸ್‌ ಆಕ್ರಮಿಸಿಕೊಂಡ ಜದ್ರಾನ್‌ ಶತಕಕ್ಕೆ ಕೇವಲ 2 ರನ್‌ ಅಗತ್ಯವಿದ್ದಾಗ ಔಟಾದರು. ಅವರು ಎಸೆತಕ್ಕೊಂದರಂತೆ 98 ರನ್‌ ಬಾರಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ, 2 ಸಿಕ್ಸರ್‌ ಸೇರಿತ್ತು.

ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳೂ ಲಂಕಾ ದಾಳಿಯನ್ನು ದಿಟ್ಟ ರೀತಿಯಲ್ಲಿ ಎದುರಿಸಿದರು. ರೆಹಮತ್‌ ಶಾ 55, ನಾಯಕ ಹಶ್ಮತುಲ್ಲ ಶಾಹಿದಿ 38, ಮೊಹಮ್ಮದ್‌ ನಬಿ ಔಟಾಗದೆ 27 ರನ್‌ ಹೊಡೆದರು. ಜದ್ರಾನ್‌-ರೆಹಮತ್‌ ಜೋಡಿ ದ್ವಿತೀಯ ವಿಕೆಟಿಗೆ 146 ರನ್‌ ಸೇರಿಸಿ ಲಂಕಾ ಬೌಲರ್‌ಗಳಿಗೆ ಬೆವರಿಳಿಸಿದರು.

ಶ್ರಿಲಂಕಾ ಅಗ್ರ ಕ್ರಮಾಂಕದ ಕುಸಿತಕ್ಕೆ ಸಿಲುಕಿತು. 84ಕ್ಕೆ 4 ವಿಕೆಟ್‌ ಬಿತ್ತು. ಆದರೆ 5ನೇ ವಿಕೆಟಿಗೆ ಜತೆಗೂಡಿದ ಚರಿತ ಅಸಲಂಕ (91) ಮತ್ತು ಧನಂಜಯ ಡಿ ಸಿಲ್ವ (51) ಸೇರಿಕೊಂಡು ಹೋರಾಟವನ್ನು ಜಾರಿಯಲ್ಲಿರಿಸಿದರು.

ಅಫ್ಘಾನ್‌ ಪರ ಬೌಲಿಂಗ್‌ ದಾಳಿಗಿಳಿದ ಎಲ್ಲ 6 ಮಂದಿ ವಿಕೆಟ್‌ ಉರುಳಿಸಲು ಯಶಸ್ವಿಯಾದರು.

andolanait

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

3 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

4 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

4 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

4 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

5 hours ago