ಕ್ರೀಡೆ

ಏಕದಿನ ವಿಶ್ವಕಪ್​: ವೇಳಾಪಟ್ಟಿ ಪ್ರಕಟಿಸಲು ಮುಹೂರ್ತ ಫಿಕ್ಸ್​ ಮಾಡಿದ ಬಿಸಿಸಿಐ ಮತ್ತು ಐಸಿಸಿ

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ ಅಂದರೆ ಜೂನ್​ 27ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಮತ್ತು ಐಸಿಸಿ ಶನಿವಾರ ಪ್ರಕಟಿಸಿದೆ.

ಹಲವಾರು ಕಾರಣಗಳಿಂದಾಗಿ ಮುಂದೂಡಲ್ಪಡುತ್ತ ಬಂದ ಏಕದಿನ ವಿಶ್ವಕಪ್​ ವೇಳಾಪಟ್ಟಿಗೆ ಇತ್ತೀಚೆಗೆ ಪಾಕಿಸ್ತಾನದ ತಗಾದೆಯಿಂದಾಗಿ ತೊಂದರೆಯಾಗಿತ್ತು. ಇದೀಗ ಎಲ್ಲ ವಿಘ್ನಗಳು ನಿವಾರಣೆಯಾಗಿದ್ದು, ಜೂನ್​ 27ರಂದು ಮುಂಬೈನಲ್ಲಿ ನಡೆಯಲಿರುವ ವಿಶೇಷ ಸಮಾರಂಭವೊಂದರಲ್ಲಿ 13ನೇ ಆವೃತ್ತಿಯ ಏಕದಿನ ವಿಶ್ವಕಪ್​ ವೇಳಾಪಟ್ಟಿಯನ್ನು ಬೆಳಗ್ಗೆ 11.30ಕ್ಕೆ ಬಿಡುಗಡೆ ಮಾಡಲು ಬಿಸಿಸಿಐ ಮತ್ತು ಐಸಿಸಿ ಸಿದ್ಧತೆ ನಡೆಸಿದೆ.

ಸಂಭಾವ್ಯ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್​ 5ರಂದು ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ಹಾಲಿ ರನ್ನರ್​ಅಪ್​ ನ್ಯೂಜಿಲೆಂಡ್​ ತಂಡಗಳ ನಡುವಿನ ಮುಖಾಮುಖಿಯೊಂದಿಗೆ ಅಹಮದಾಬಾದ್​ನಲ್ಲಿ ಟೂರ್ನಿಗೆ ಚಾಲನೆ ಸಿಗಲಿದೆ. ನವೆಂಬರ್​ 19ರಂದು ಫೈನಲ್​ ಪಂದ್ಯ ಕೂಡ ಇಲ್ಲೇ ನಡೆಯಲಿದೆ. ಭಾರತ ತಂಡ ಅಕ್ಟೋಬರ್​ 8ರಂದು ಚೆನ್ನೈನಲ್ಲಿ ಆಸ್ಟ್ರೆಲಿಯಾ ವಿರುದ್ಧ ಅಭಿಯಾನ ಆರಂಭಿಸಲಿದ್ದರೆ, ಅಕ್ಟೋಬರ್​ 15ರಂದು ಪಾಕಿಸ್ತಾನ ವಿರುದ್ಧ ಅಹಮದಾಬಾದ್​ನಲ್ಲಿ ಹೈ-ವೋಲ್ಟೇಜ್​ ಪಂದ್ಯವನ್ನು ಆಡಲಿದೆ.

andolanait

Recent Posts

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

30 mins ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

35 mins ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

40 mins ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

45 mins ago

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

10 hours ago