ಕ್ರೀಡೆ

ಏಕದಿನ ವಿಶ್ವಕಪ್‌: ಆರಂಭಿಕ ಬ್ಯಾಟರ್​ ಶುಭ್‌ಮನ್ ಗಿಲ್ ಗೆ ಡೆಂಗ್ಯೂ

ಚೆನ್ನೈ: ಭಾರತ ತಂಡದ ಯುವ ಆರಂಭಿಕ ಬ್ಯಾಟರ್​ ಶುಬ್ಮನ್ ಗಿಲ್ ಡೆಂಗ್ಯೂನಿಂದ ಬಳಲುತ್ತಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಇದರಿಂದ ವಿಶ್ವ ಕಪ್​ಗೆ ಸಜ್ಜಾಗಿರುವ ಭಾರತಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ವಿಶ್ವಕಪ್ ಪಂದ್ಯದಲ್ಲಿ 24 ವರ್ಷದ ಗಿಲ್​ ಆಡುವ ಸಾಧ್ಯತೆಯಿಲ್ಲ.

ಬಲಗೈ ಬ್ಯಾಟರ್​ 2023 ರರಲ್ಲಿ ಏಕ ದಿನ ಮಾದರಿಯಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ರನ್ ಗಳಿಸಿದವರಾಗಿರುವುದರಿಂದ ಮೊದಲ ಪಂದ್ಯದ ಅನುಪಸ್ಥಿತಿಯು ತಂಡದ ಪಾಲಿಗೆ ದೊಡ್ಡ ಹಿನ್ನಡೆಯಾಗಿದೆ.

ಗಿಲ್ ಗುರುವಾರದ ತರಬೇತಿ ಅವಧಿಯಲ್ಲಿ ಡೆಂಗ್ಯೂನಿಂದ ಬಳಲುತ್ತಿದ್ದರು. ಭಾರತವು ಶುಕ್ರವಾರ ತ್ತೊಂದು ತರಬೇತಿ ಅವಧಿಯನ್ನು ಹೊಂದಿರುತ್ತದೆ. 24 ವರ್ಷದ ಆಟಗಾರ ಅದರ ಭಾಗವಾಗಿರುವುದಿಲ್ಲ ಎನ್ನಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬುದಾಗಿ ವರದಿ ಮಾಡಲಾಗಿದೆ.

ಒಂದು ವೇಳೆ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಚೇತರಿಸಿಕೊಳ್ಳಲು ವಿಫಲವಾದರೆ, ಇನ್ನಿಂಗ್ಸ್ ಆರಂಭದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಅಥವಾ ಕೆಎಲ್ ರಾಹುಲ್ ಆಡಲು ಇಳಿಯಬೇಕೇ ಎಂಬ ಬಗ್ಗೆ ಭಾರತ ತನ್ನ ಆಯ್ಕೆಗಳನ್ನು ಪರಿಶೀಲಿಸಲಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಗಿಲ್​ ಅನುಪಸ್ಥಿತಿಯು ತಂಡಕ್ಕೆ ಹಿನ್ನಡೆಯಾಗಿದೆ.

ಗಿಲ್ ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ ವಿರುದ್ಧ ಅದ್ಭುತ ದ್ವಿಶತಕ ಗಳಿಸಿದ್ದರು. ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಸ್ವಲ್ಪ ಕುಸಿತವನ್ನು ಹೊರತುಪಡಿಸಿ, ಅವರು ನಂಬಲಾಗದ ಸ್ಥಿರತೆಯನ್ನು ತೋರಿಸಿದ್ದರು.

andolanait

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

3 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

3 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

3 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago