ಲಕ್ನೊ : ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಮ್‌ನಲ್ಲಿ ನಡೆಯುತ್ತಿರುವ ವಿಶ್ಚಕಪ್ 2023 ಟೂರ್ನಿಯ 29ನೇ ಪಂಧ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿದೆ.
ಭಾರತವು ಈವರೆಗೆ ತಾನು ಆಡಿರುವ ಎಲ್ಲಾ ಐದು ಲೀಗ್ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಅದೇ ವೇಳೆ, ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಪಂದ್ಯಾವಳಿಯಲ್ಲಿ ತಾನಾಡಿದ ಐದು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆದ್ದಿದೆ ಹಾಗೂ ಸ್ಪರ್ಧೆಯಲ್ಲಿ ಉಳಿಯಲು ಕೊನೆಯ ಪ್ರಯತ್ನವೊಂದನ್ನು ಮಾಡಲಿದೆ.
ಸದ್ಯ ಭಾರತ 4 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 26ರನ್ ಕಲೆ ಹಾಖಕಿದೆ. ಗಿಲ್9 ರನ್ ಗಳಿಸಿ ಕ್ರಿಸ್ ವೋಕ್ಸ್ ಗೆ ವಿಕೆಟ್ ಒಪ್ಪಿಸಿದರು.





