Mysore
21
overcast clouds
Light
Dark

ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಚಾಲನೆ: ಉದ್ಘಾಟನಾ ಪಂದ್ಯಕ್ಕೆ ಸ್ಟಾರ್ ಆಟಗಾರರ ಗೈರು

ಮೊಟೇರಾ : ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ಉದ್ಘಾಟನಾ ಪಂದ್ಯಕ್ಕೆ ಚಾಲನೆ ದೊರೆತಿದ್ದು, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಟಾಸ್‌ ಜಯಿಸಿರುವ ನ್ಯೂಝಿಲ್ಯಾಂಡ್‌ ಬೌಲಿಂಗ್‌ ಆಯ್ದುಕೊಂಡಿದೆ.

ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸಲಿದ್ದು, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ಅಲಭ್ಯರಾಗಿದ್ದಾರೆ. ನ್ಯೂಝಿಲ್ಯಾಂಡ್‌ ತಂಡಕ್ಕೂ ಗಾಯದ ಸಮಸ್ಯೆ ಕಾಡುತ್ತಿದ್ದು, ನಾಯಕ ಕೇನ್ ವಿಲಿಯಮ್ಸನ್ ಅಲಭ್ಯರಾಗಿದ್ದು, ಟಾಮ್ ಲಥಾಮ್ ನಾಯಕತ್ವ ವಹಿಸಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ