ಚೆನ್ನೈ: ಭಾರತ ಬೌಲಿಂಗ್‌ನನ್ನು ಎದುರಿಸುವಲ್ಲಿ ವಿಫಲರಾದ ಆಸ್ಟ್ರಲಿಯಾ ತಂಡ ವಿಶ್ವಕಪ್ ಅಭಿಯಾನದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಎಡವಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಒಬ್ಬ ಬ್ಯಾಟ್ಸ್‌ಮನ್ ಕೂಡ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತದ ಸಂಘಟಿದ ಬೌಲಿಂಗ್ ದಾಳಿಗೆ ನಲುಗಿ ಹೋಯಿತು. ಬುಮ್ರಾ ಭಾರತಕ್ಕೆ ಮೊದಲ ಯಶಸ್ಸನ್ನು ನೀಡಿದರು. ಬುಮ್ರಾ ಮಿಚೆಲ್ ಮಾರ್ಷ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಇಲ್ಲಿಂದ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಅರ್ಧಶತಕದ ಜೊತೆಯಾಟವಾಡಿದರು.
ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ವಾರ್ನರ್ 41 ರನ್ ಗಳಿಸಿದ್ದಾಗ ಕುಲದೀಪ್ ಯಾದವ್‌ಗೆ ಬಲಿಯಾದರು. ಅವರ ನಂತರ, ಸ್ಟೀವ್ ಸ್ಮಿತ್ ಅವರನ್ನು ಜಡೇಜಾ 46 ರನ್‌ಗಳಿಗೆ ಔಟ್ ಮಾಡಿದರು. ಲಬುಸ್ಚಾಗ್ನೆ 27 ರನ್ ಗಳಿಸಿದ್ದಾಗ ರವೀಂದ್ರ ಜಡೇಜಾ ಅವರ ಎಸೆತದಲ್ಲಿ ಹೊರನಡೆದರು. ಅಲೆಕ್ಸ್ ಕ್ಯಾರಿಯನ್ನೂ ಜಡೇಜಾ ಖಾತೆ ತೆರೆಯದೆ ವಾಪಸ್ ಕಳುಹಿಸಿದರು.
ಕುಲದೀಪ್ ಯಾದವ್ ಮತ್ತೊಮ್ಮೆ 15 ರನ್ ಗಳಿಸಿದ್ದ ಮ್ಯಾಕ್ಸ್ ವೆಲ್ ರನ್ನು ಔಟ್ ಮಾಡಿದರು. ಇದಾದ ನಂತರ ಅಶ್ವಿನ್ 8 ರನ್ ಬಾರಿಸಿದ್ದ ಕ್ಯಾಮರಾನ್ ಗ್ರೀನ್ ಅವರನ್ನು ಔಟ್ ಮಾಡಿದರು. ಒಟ್ಟಾರೆ ಆಸ್ಟ್ರೇಲಿಯಾ 49.3 ಓವರ್ ನಲ್ಲಿ 199ಕ್ಕೆ ಆಲೌಟ್ ಆಯಿತು. ಭಾರತದ ಪರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದರು. ಕುಲದೀಪ್ 2 ವಿಕೆಟ್ ಪಡೆದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…