Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಏಕದಿನ ವಿಶ್ವಕಪ್‌: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ನೆದರ್ಲೆಂಡ್ಸ್‌!

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ನ್ಯೂಜಿಲೆಂಡ್‌ ಹಾಗೂ ನೆದರ್ಲೆಂಡ್ಸ್‌ ತಂಡಗಳು ಮುಖಾಮುಖಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ನೆದರ್ಲೆಂಡ್ಸ್ ತಂಡ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಟಾಮ್‌ ಲೇಥಮ್‌ ನಾಯಕತ್ವದ ನ್ಯೂಜಿಲೆಂಡ್‌ ತಂಡದ ಬ್ಯಾಟಿಂಗ್‌ ಮಾಡಲಿದೆ.

ನ್ಯೂಜಿಲೆಂಡ್‌ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ತರಲಾಗಿದೆ. ಜಿಮ್ಮಿ ನೀಶಮ್ ಅವರ ಸ್ಥಾನಕ್ಕೆ ಲಾಕಿ ಫರ್ಗ್ಯೂಸನ್‌ ಅವರು ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನು ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ನಾಯಕ ಕೇನ್‌ ವಿಲಿಯಮ್ಸನ್‌ ಅವರು ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಅವರು ಬದಲು ಹಂಗಾಮಿ ನಾಯಕ ಟಾಮ್‌ ಲೇಥಮ್‌ ಅವರು ತಂಡವನ್ನು ಮುನ್ನಡೆಸಿದ್ದಾರೆ.

ಇನ್ನು ನೆದರ್ಲೆಂಡ್ಸ್‌ ಪ್ಲೇಯಿಂಗ್‌ XIನಲ್ಲಿ ಎರಡು ಬದಲಾವಣೆ ತರಲಾಗಿದೆ. ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್ ಮತ್ತು ರಯಾನ್ ಕ್ಲೈನ್ ಡಚ್‌ ತಂಡದ ಪ್ಲೇಯಿಂಗ್‌ XIಗೆ ಮರಳಿದ್ದಾರೆ.

ಇತ್ತಂಡಗಳ ಪ್ಲೇಯಿಂಗ್‌ XI : ನ್ಯೂಜಿಲೆಂಡ್‌: ಡೆವೋನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್ (ವಿ/ಕಿ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್, ಟ್ರೆಂಟ್ ಬೌಲ್ಟ್

ನೆದರ್ಲೆಂಡ್ಸ್‌: ವಿಕ್ರಮ್‌ಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್‌ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್(ನಾಯಕ, ವಿ.ಕೀ), ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ರಯಾನ್ ಕ್ಲೈನ್, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ