ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ.
ಈ ಗೀತೆಯನ್ನು ದಿಲ್ ಜಶ್ನ್ ಬೋಲೆ ಎಂದು ಕರೆಯಲಾಗುತ್ತಿದ್ದು ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್‌ನ ಖ್ಯಾತ ಸಂಗೀತ ಸಂಯೋಜಕ ಪ್ರೀತಮ್ ಈ ಗೀತೆಗೆ ಸಂಗೀತ ನೀಡಿದ್ದಾರೆ. ಗೀತೆಯಲ್ಲಿ ಭಾರತದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರ ಪತ್ನಿ, ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಕೂಡ ಇದ್ದಾರೆ.
3 ನಿಮಿಷಗಳ 22 ಸೆಕೆಂಡ್‌ಗಳ ಹಾಡಿಗೆ ಶ್ಲೋಕ್ ಲಾಲ್ ಹಾಗೂ ಸಾವೇರಿ ವರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಪ್ರೀತಮ್, ನಕಾಶ್ ಅಝೀಝ್, ಶ್ರೀರಾಮ ಚಂದ್ರ, ಅಮಿತ್ ಮಿಶ್ರಾ, ಜೋನಿತಾ ಗಾಂಧಿ, ಆಕಾಶ ಸಿಂಗ್ ಹಾಗೂ ಚರಣ್ ಹಾಡಿದ್ದಾರೆ.
https://x.com/ICC/status/1704384709646864506?s=20
ಕ್ರಿಕೆಟ್ ಸಂಭ್ರಮವನ್ನು ಆಚರಿಸಲು ಜಗತ್ತನ್ನು ಆಹ್ವಾನಿಸುವ ಗುರಿಯನ್ನು ಈ ಹಾಡು ಹೊಂದಿದೆ. ಕ್ರಿಕೆಟ್ ಬಗ್ಗೆ ಭಾರತದಲ್ಲಿ ಅತೀ ಹೆಚ್ಚು ಮಮಕಾರವಿದ್ದು , ಇದುವರೆಗಿನ ಅತಿದೊಡ್ಡ ವಿಶ್ವಕಪ್‌ಗಾಗಿ ದಿಲ್ ಜಶ್ನ್ ಬೋಲೆ ಅನ್ನು ರಚಿಸುವುದು ನನಗೆ ಅಪಾರ ಗೌರವವಾಗಿದೆ. ಈ ಹಾಡು 1.4 ಶತಕೋಟಿ ಭಾರತೀಯ ಅಭಿಮಾನಿಗಳಿಗೆ ಮಾತ್ರವಲ್ಲ ಇಡೀ ಜಗತ್ತು ಭಾರತಕ್ಕೆ ಬಂದು ಇದುವರೆಗಿನ ಅತಿದೊಡ್ಡ ವಿಶ್ವಕಪ್ ನ ಭಾಗವಾಗಲು ನೆರವಾಗಲಿದೆ ಎಂದು ಸಂಗೀತ ಸಂಯೋಜಕ ಪ್ರೀತಮ್ ಹೇಳಿದ್ದಾರೆ.
ಐಸಿಸಿ ಪ್ರಯತ್ನದ ಹೊರತಾಗಿಯೂ ಹಾಡಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳಿಂದ ಆತ್ಮೀಯ ಸ್ವಾಗತ ಸಿಗಲಿಲ್ಲ. 2011 ಹಾಗೂ 2015ರ ಹಿಂದಿನ ಆವೃತ್ತಿಗಳ ಗೀತೆಗಳಂತೆ ಕ್ರಿಕೆಟ್ ಅಭಿಮಾನಿಗಳ ನಾಡಿಮಿಡಿತವನ್ನು ಸೆಳೆಯಲು ಈ ಗೀತೆಗೆ ಸಾಧ್ಯವಾಗದ ಕಾರಣ ಐಸಿಸಿಯನ್ನು ಎಲ್ಲರೂ ಟೀಕಿಸಿದ್ದಾರೆ.
2011ರ ವಿಶ್ವಕಪ್ ಗೀತೆಯನ್ನು ಶಂಕರ್ ಮಹಾದೇವನ್ ಸಂಯೋಜಿಸಿದ್ದರು ಹಾಗೂ ಇದನ್ನು ದೇ ಘುಮಾಕೆ ಎಂದು ಕರೆಯಲಾಗಿತ್ತು.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…