ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚೀನಾವೂ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದುಕೊಂಡಿದೆ. ಮೊದಲ ಚಿನ್ನ ಗೆದ್ದ ಚೀನಾ ಶುಭಾರಂಭ ಮಾಡಿಕೊಂಡಿದೆ.
ಶೂಟಿಂಗ್10 ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಸ್ಪರ್ಧಿಗಳು ಈ ಸಾಧನೆ ಮಾಡಿದ್ದಾರೆ. ಚೀನಾದ ಹುವಾನ್ ಯುಟಿಂಗ್ ಮತ್ತು ಶೆಂಗ್ ಲಿಹಾವೊ ಜೋಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದೆ. ಫೈನಲ್‌ನಲ್ಲಿ 16-12ರ ಅಂತರದಲ್ಲಿ ಚೀನಾದ ಜೋಡಿಯು ಕೋರಿಯಾ ವಿರುದ್ಧ ಜಯ ಗಳಿಸಿದೆ.
ಇದೇ ವಿಭಾಗದಲ್ಲಿ ಕೋರಿಯಾದ ಕೆಯಮ್ ಜಿ-ಹೈಯಾನ್ ಮತ್ತು ಪಾರ್ಕ್ ಹಾ-ಜುನ್ ಜೋಡಿ ಬೆಳ್ಳಿ ಮತ್ತು ಕಜಕಿಸ್ತಾನದ ಅಲೆಕ್ಸಾಂಡರ್ ಲೆ ಮತ್ತು ಇಸ್ಲಾಂ ಸತ್ಪಯೇವ್ ಜೋಡಿ ಕಂಚಿನ ಪದಕ ಗೆದ್ದಿದೆ.
ಮೂರು ವರ್ಷಗಳ ಹಿಂದಿನ ಟೊಕಿಯೊ ಒಲಿಂಪಿಕ್ಸ್‌ನಲ್ಲೂ ಶೂಟಿಂಗ್ ವಿಭಾಗದಲ್ಲಿ ಚೀನಾ ದೇಶದ ಸ್ಪರ್ಧಿಗಳೇ ಚಿನ್ನದ ಪದಕ ಗಳಿಸಿದ್ದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…