ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ವಿಭಾಗದ ಪಂದ್ಯದಲ್ಲಿ ಭಾರತೀಯ ಆಟಗಾರ್ತಿ ಪಿವಿ ಸಿಂಧು ಎಸ್ಟೋನಿಯಾದ ಕ್ರಿಸ್ಟಿನ್ ಕೂಬಾ ವಿರುದ್ಧ 21-9, 21-10 ಅಂಕಗಳ ಅಂತರದಿಂದ ಗೆಲುವನ್ನು ದಾಖಲಿಸುವ ಮೂಲಕ ಪ್ರಿ ಕ್ವಾರ್ಟರ್ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.
ಆರಂಭದಿಂದಲೂ ಎದುರಾಳಿ ವಿರುದ್ಧ ದೊಡ್ಡ ಮಟ್ಟದ ಅಂತರವನ್ನು ಕಾಯ್ದುಕೊಂಡು ಆಕ್ರಮಣಕಾರಿ ಆಟವನ್ನಾಡಿದ ಪಿವಿ ಸಿಂಧು ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ನಿರೀಕ್ಷೆಯನ್ನು ಹುಟ್ಟುಹಾಕಿದ್ದಾರೆ.