ಕ್ರೀಡೆ

ಏಕದಿನ ಪಂದ್ಯ : ಭಾರತ ಕ್ರಿಕೆಟ್‌ ತಂಡಕ್ಕೆ ಎಂಟ್ರಿ ಕೊಟ್ಟ ಆರ್‌ಸಿಬಿಯ ಶಹಬಾಜ್ ಅಹ್ಮದ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುನಿನ 2ನೇ ಏಕದಿನ ಪಂದ್ಯ ರಾಂಚಿಯಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ತಂಡದಲ್ಲಿ ಮೂವರು ಸ್ಪಿನ್ನರ್​ಗಳಿಗೆ ಅವಕಾಶ ನೀಡಲಾಗಿದೆ. ಅವರಲ್ಲಿ ಒಬ್ಬರು ಆರ್​ಸಿಬಿಯ ಸ್ಪಿನ್ ಆಲ್​ರೌಂಡರ್ ಶಹಬಾಜ್ ಅಹ್ಮದ್. ಈ ಹಿಂದೆ ಶಹಬಾಜ್ ಅಹ್ಮದ್, ಟೀಮ್ ಇಂಡಿಯಾದಲ್ಲಿ ಆಯ್ಕೆಯಾಗಿದ್ದರೂ, ಅವರಿಗೆ ಆಡುವ XI ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳವನ್ನು ಮುನ್ನಡೆಸಿರುವ ಶಹಬಾಜ್ ಅದ್ಭುತ ಆಲ್‌ರೌಂಡರ್ ಆಗಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡುವುದರ ಜೊತೆಗೆ ಅದ್ಭುತ ಫೀಲ್ಡರ್ ಕೂಡ ಆಗಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾದಲ್ಲಿ ಶಹಬಾಜ್ ಅಹ್ಮದ್ ಆಯ್ಕೆಯಾಗಿದ್ದರು. ಸರಣಿ ಆರಂಭಕ್ಕೂ ಮುನ್ನ ಇಂಜುರಿಗೊಂಡಿದ್ದ ವಾಷಿಂಗ್ಟನ್ ಸುಂದರ್‌ ಬದಲಿಯಾಗಿ, ಶಹಬಾಜ್ ಅಹ್ಮದ್​ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಆ ಪ್ರವಾಸದಲ್ಲಿ ಅವರಿಗೆ ಆಡುವ ಇಲೆವೆನ್​ನಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಆದರೆ ಶಹಬಾಜ್ ಅಹ್ಮದ್, ಇಂದು ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡುವ ಅವಕಾಶ ಸಿಕ್ಕಿದೆ.

ಬಂಗಾಳದ ಪರ ಕ್ರಿಕೆಟ್ ಆಡುವ ಶಹಬಾಜ್ ಮೂಲತಃ ಹರಿಯಾಣದ ಮೇವಾತ್ ಜಿಲ್ಲೆಯವರು. ಆದರೆ, ಅವರು ಹರಿಯಾಣದಿಂದ ಬಂಗಾಳಕ್ಕೆ ಹೋಗುವುದರ ಹಿಂದೆ ಒಂದು ಕಥೆಯಿದೆ. ವಾಸ್ತವವಾಗಿ ಶಹಬಾಜ್‌ ಅವರ ತಂದೆಗೆ ಶಹಬಾಜ್ ಅಹ್ಮದ್ ಇಂಜಿನಿಯರ್ ಆಗಬೇಕೆಂಬ ಕನಸಿತ್ತು. ಹೀಗಾಗಿ ತಂದೆಯ ಕನಸಿನಂತೆ ಇಂಜಿನಿಯರಿಂಗ್ ಮಾಡಲು ಕಾಲೇಜ್ ಸೇರಿಕೊಂಡ ಶಹಬಾಜ್​ಗೆ 3 ವರ್ಷಗಳ ಬಳಿಕ ಕ್ರಿಕೆಟ್ ಮೇಲಿನ ಒಲವು ಹೆಚ್ಚಾಯಿತು. ಇದನ್ನು ಕಂಡ ಅವರ ತಂದೆ ಶಹಬಾಜ್​ಗೆ ಕ್ರಿಕೆಟ್ ಅಥವಾ ಓದು ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಹೇಳಿದರು. ಇದನ್ನು ಕೇಳಿದ ಶಹಬಾಜ್ ಕ್ರಿಕೆಟ್ ಆಡಲು ನಿರ್ಧರಿಸಿದರು.

7 ಪಂದ್ಯಗಳಲ್ಲಿ 6 ಶತಕ

ಮೊದಲು ಗುರ್ಗಾಂವ್‌ನ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದ ಶಹಬಾಜ್, ಗೆಳೆಯ ಪ್ರಮೋದ್ ಚಾಂಡಿಲನ ಇಚ್ಛೆಯಂತೆ ಬಂಗಾಳಕ್ಕೆ ಹೋಗಿ ತಪನ್ ಮೆಮೋರಿಯಲ್ ಕ್ಲಬ್ ಸೇರಿಕೊಂಡರು. ಈ ಕ್ಲಬ್‌ಗಾಗಿ ಮೊದಲ 7 ಪಂದ್ಯಗಳಲ್ಲಿ 6 ಶತಕಗಳನ್ನು ಬಾರಿಸಿದ ಶಹಬಾಜ್ ಬೌಲಿಂಗ್​ನಲ್ಲೂ ಉತ್ತಮ ಪ್ರದರ್ಶನ ತೋರಿದರು. ಈ ಪ್ರದರ್ಶನ ನೋಡಿದ ಬಂಗಾಳ ಕ್ರಿಕೆಟ್‌ ಸಂಸ್ಥೆ ಅವರನ್ನು ಪ್ರಥಮ ದರ್ಜೆಯ ಕ್ರಿಕೆಟ್​ಗೆ ಆಯ್ಕೆ ಮಾಡಿತು.

andolana

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

2 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

2 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

2 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

2 hours ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

2 hours ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

2 hours ago