ನವದೆಹಲಿ: ಸಲಿಂಗ ವಿವಾಹದ ಬಗ್ಗೆ ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವದ ಸ್ಥಿತಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದ ಹಿನ್ನೆಲೆಯಲ್ಲಿ ದ್ಯುತಿ ಚಂದ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ವಿಶೇಷ ವಿವಾಹ ಕಾಯಿದೆ (Special Marriage Act)ಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ. ಅದನ್ನು ನಾವು ವ್ಯಾಖ್ಯಾನಿಸಬಹುದು, ಆದರೆ ಅದನ್ನು ಬದಲಾಯಿಸುವುದು ಸಂಸತ್ತು ಅಂದರೆ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.
ಸಲಿಂಗಿಗಳು ಒಟ್ಟಿಗೆ ಇರುವುದನ್ನು ಸುಪ್ರೀಂ ಕೋರ್ಟ್ ತಡೆದಿಲ್ಲ. ಸಲಿಂಗಿಗಳ ವಿವಾಹಕ್ಕೆ ಸಂಬಂಧಿಸಿದಂತೆ ಕಾನೂನು ಇಲ್ಲದೇ ಇರುವುದರಿಂದ ಅದರಲ್ಲಿ ಮಧ್ಯಪ್ರವೇಶಿಸುವುದಕ್ಕೆ ಸಾಧ್ಯವಿಲ್ಲ ಎಂದಷ್ಟೇ ಹೇಳಿದೆ ಎಂದು ದ್ಯುತಿ ಚಂದ್ ಹೇಳಿದ್ದಾರೆ.
“ಕೇಂದ್ರ ಸರ್ಕಾರ ಮತ್ತು ಸಂಸತ್ತು ಖಂಡಿತವಾಗಿಯೂ ಪ್ರಕರಣವನ್ನು ಪರಿಗಣಿಸುತ್ತದೆ ಮತ್ತು ಭವಿಷ್ಯದಲ್ಲಿ ಸಲಿಂಗ ವ್ಯಕ್ತಿಗಳ ನಡುವಿನ ವಿವಾಹಕ್ಕೆ ಸರಿಯಾದ ಕಾನೂನು ಮಾಡುತ್ತದೆ ಎಂದು ನಾವು ಆಶಾವಾದಿಗಳಾಗಿದ್ದೇವೆ” ಎಂದು ಚಂದ್ ಹೇಳಿದರು.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…