ಕ್ರೀಡೆ

ಪಾಕಿಸ್ತಾನ ಎ ಮುಡಿಗೆ ಉದಯೋನ್ಮುಖ ಏಷ್ಯಾ ಕಪ್ 2023 ಪ್ರಶಸ್ತಿ.! : ಭಾರತಕ್ಕೆ ನಿರಾಸೆ

ಕೊಲಂಬೋ: ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023ರ ಫೈನಲ್‌ನಲ್ಲಿ ಪಾಕಿಸ್ತಾನ ಎ ತಂಡವು ಭಾರತ ಎ ತಂಡವನ್ನು 128 ರನ್‌ಗಳಿಂದ ಸೋಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಎ ತಂಡ ಭಾರತ ತಂಡಕ್ಕೆ 353 ರನ್ ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 224 ರನ್‌ಗಳಿಗೆ ಸೋಲು ಕಂಡಿತು. ಭಾರತದ ಪರ ಅಭಿಷೇಕ್ ಶರ್ಮಾ ಗರಿಷ್ಠ 61 ರನ್ ಗಳಿಸಿದರು. ಅಭಿಷೇಕ್ ಬಿಟ್ಟರೆ ಭಾರತದ ಯಾವುದೇ ಆಟಗಾರ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ. ಪಾಕಿಸ್ತಾನ ಪರ ಟೈಬ್ ತಾಹಿರ್ ಶತಕ ಬಾರಿಸಿದರು.

ಪಾಕಿಸ್ತಾನ ನೀಡಿದ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಸಾಯಿ ಸುದರ್ಶನ್ ಮತ್ತು ಅಭಿಷೇಕ್ ಓಪನಿಂಗ್ ನೀಡಿದರು. ಸುದರ್ಶನ್ 28 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅಭಿಷೇಕ್ ಅರ್ಧಶತಕ ಗಳಿಸಿದರು. 51 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದರು. ನಿಕಿನ್ ಜೋಸ್ 11 ರನ್ ಗಳಿಸಿದರು. ನಾಯಕ ಯಶ್ ಧುಲ್ 4 ಬೌಂಡರಿಗಳ ನೆರವಿನಿಂದ 39 ರನ್ ಗಳಿಸಿದರು. ನಿಶಾಂತ್ ಸಿಂಧು 9 ರನ್ ಗಳಿಸಿ ಔಟಾದರು. ರಿಯಾನ್ ಪರಾಗ್ 14 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಹರ್ಷಿತ್ ರಾಣಾ 13 ರನ್ ಕೊಡುಗೆ ನೀಡಿದರು. ರಾಜ್ಯವರ್ಧನ್ 11 ರನ್ ಗಳಿಸಿ ಔಟಾದರು. ಮಾನವ್ ಸುತಾರ್ 7 ರನ್ ಗಳಿಸಿ ಅಜೇಯರಾಗಿ ಉಳಿದರು.

ಪಾಕ್ ಪರ ಸುಫಿಯಾನ್ ಮುಕಿಮ್ 10 ಓವರ್‌ಗಳಲ್ಲಿ 66 ರನ್ ನೀಡಿ 3 ವಿಕೆಟ್ ಪಡೆದರು. ಅರ್ಷದ್ ಇಕ್ಬಾಲ್ 7 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಮೆಹ್ರಾನ್ ಮುಮ್ತಾಜ್ ಮತ್ತು ಮೊಹಮ್ಮದ್ ವಾಸಿಂ ಜೂನಿಯರ್ ತಲಾ ಎರಡು ವಿಕೆಟ್ ಪಡೆದರು.

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಎ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ತಂಡದ ಪರ ಟೈಬ್ ತಾಹಿರ್ ಶತಕ ಗಳಿಸಿದರು. ಅವರು 71 ಎಸೆತಗಳಲ್ಲಿ 108 ರನ್ ಗಳಿಸಿದರು. ತಾಹಿರ್ ಅವರ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ 62 ಎಸೆತಗಳಲ್ಲಿ 65 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಅಯೂಬ್ 51 ಎಸೆತಗಳಲ್ಲಿ 59 ರನ್ ಗಳಿಸಿದರು. ಉಮರ್ ಯೂಸುಫ್ 35 ರನ್ ಕೊಡುಗೆ ನೀಡಿದರು. ಮುಬಾಸಿರ್ ಖಾನ್ 47 ಎಸೆತಗಳಲ್ಲಿ 35 ರನ್ ಗಳಿಸಿದರು. ಮೊಹಮ್ಮದ್ ವಾಸಿಂ ಜೂನಿಯರ್ 17 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತ ಎ ಪರ ಬೌಲಿಂಗ್ ಮಾಡುತ್ತಿದ್ದ ರಿಯಾನ್ ಪರಾಗ್ 4 ಓವರ್ ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರು. ರಾಜ್ಯವರ್ಧನ್ 6 ಓವರ್ ಗಳಲ್ಲಿ 48 ರನ್ ನೀಡಿ 2 ವಿಕೆಟ್ ಪಡೆದರು. ಹರ್ಷಿತ್ ರಾಣಾ 6 ಓವರ್ ಗಳಲ್ಲಿ 51 ರನ್ ನೀಡಿ ಒಂದು ವಿಕೆಟ್ ಪಡೆದರು. ಮಾನವ್ ಸುತಾರ್ ಮತ್ತು ನಿಶಾಂತ್ ಸಿಂಧು ತಲಾ ಒಂದು ವಿಕೆಟ್ ಪಡೆದರು.

andolanait

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

4 hours ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

4 hours ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

4 hours ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

4 hours ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

4 hours ago