ಕ್ರೀಡೆ

ಏಷ್ಯಾಕಪ್ ಆಯೋಜನೆಗೆ ಸಂಬಂಧಿಸಿದಂತೆ ಹೊಸ ಕ್ಯಾತೆ ತೆಗೆದ ಪಾಕಿಸ್ತಾನ..!

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗಾಗಲೇ ಏಷ್ಯಾಕಪ್‌ ವೇಳಾಪಟ್ಟಿಯನ್ನು ಪ್ರಕಟಿಸಬೇಕಾಗಿತ್ತು. ಆದರೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಹಗ್ಗಜಗ್ಗಾಟದಿಂದಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟಣೆ ವಿಳಂಬವಾಗುತ್ತಿದೆ.

ಏಷ್ಯಾಕಪ್ ಆಯೋಜನೆಯ ಬಗ್ಗೆ ದಿನಕ್ಕೊಂದು ವರಸೆ ಬದಲಿಸುತ್ತಿರುವ ಪಾಕ್ ಇದೀಗ ಬೇಡಿಕೆಯೊಂದನ್ನು ಎಸಿಸಿ (ACC) ಮುಂದಿಟ್ಟಿದೆ ಎಂದು ವರದಿಯಾಗಿದೆ.

ತಿಂಗಳ ಹೋರಾಟದ ನಂತರ, ಅಂತಿಮವಾಗಿ ಕಳೆದ ತಿಂಗಳು ಪಂದ್ಯಾವಳಿಯನ್ನು ಆಯೋಜಿಸಲು ಒಪ್ಪಂದಕ್ಕೆ ಬರಲಾಗಿತ್ತು. ಆದರೆ ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ  ಮತ್ತೆ ಅದನ್ನು ಮಧ್ಯದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದೆ.

ವರದಿಗಳ ಪ್ರಕಾರ, ಹೊಸ ಪಿಸಿಬಿ ಮುಖ್ಯಸ್ಥರಾದ ಝಕಾ ಅಶ್ರಫ್ ಈಗ ಪಾಕಿಸ್ತಾನದಲ್ಲಿ ನಾಲ್ಕಕ್ಕೂ ಹೆಚ್ಚಿನ ಏಷ್ಯಾಕಪ್ ಪಂದ್ಯಗಳನ್ನು ನಡೆಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್

ಆಗಸ್ಟ್-ಸೆಪ್ಟೆಂಬರ್​ನಲ್ಲಿ ನಡೆಯಲಿರುವ ಏಷ್ಯಾಕಪ್ ಈ ಬಾರಿ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ. ಪಾಕಿಸ್ತಾನ ಮಂಡಳಿಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಅವರ ಪ್ರಸ್ತಾಪದ ನಂತರವೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಇದನ್ನು ಅಂಗೀಕರಿಸಿತು. ಇದರ ಅಡಿಯಲ್ಲಿ 6 ತಂಡಗಳ ಟೂರ್ನಿಯ ಮೊದಲ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಫೈನಲ್ ಸೇರಿದಂತೆ ಉಳಿದ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಪಂದ್ಯಾವಳಿಯು ಆಗಸ್ಟ್ 31 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ.

ಎಸಿಸಿ ಸಭೆಯಲ್ಲಿ ಪಿಸಿಬಿ ಆಗ್ರಹ

ಏಷ್ಯಾಕಪ್ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ಜುಲೈ 16ರ ಭಾನುವಾರದಂದು ನಡೆಯಲಿರುವ ಎಸಿಸಿ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಗುವ ಸಾಧ್ಯತೆಯಿದ್ದು, ಪಾಕಿಸ್ತಾನದ ಆಡಳಿತ ಮಂಡಳಿ ಸಭೆಯನ್ನು ತಡೆಯುವ ಉತ್ಸಾಹದಲ್ಲಿದೆ. ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಪಾಕಿಸ್ತಾನ ಮಂಡಳಿಯ ಹೊಸ ಮುಖ್ಯಸ್ಥ ಝಕಾ ಅಶ್ರಫ್ ಅವರು ಸಭೆಯಲ್ಲಿ ಹೊಸ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ. ಈ ವಾರ ಡರ್ಬನ್‌ನಲ್ಲಿ ನಡೆಯುವ ಐಸಿಸಿ ಸಮ್ಮೇಳನದಲ್ಲಿ ಎಸಿಸಿ ಸದಸ್ಯ ರಾಷ್ಟ್ರಗಳಿಗೆ ಹೊಸ ಬೇಡಿಕೆಗಳನ್ನು ಸಲ್ಲಿಸುವುದಾಗಿ ಅಶ್ರಫ್ ಸೂಚಿಸಿದ್ದಾರೆ ಎಂದು ವರದಿ ತಿಳಿಸಿದೆ.

ಪಾಕ್ ಬೇಡಿಕೆಗೆ ಮಳೆಯೇ ಕಾರಣ

ವರದಿಯಲ್ಲಿ, ಪಿಸಿಬಿ ಪಾಕಿಸ್ತಾನದಲ್ಲಿ 4 ಕ್ಕೂ ಹೆಚ್ಚು ಪಂದ್ಯಗಳನ್ನು ಆಯೋಜಿಸಲು ಬಯಸಿದೆ ಎಂದು ಪಾಕಿಸ್ತಾನಿ ಮಂಡಳಿಯ ಮೂಲಗಳು ತಿಳಿಸಿವೆ. ಶ್ರೀಲಂಕಾದಲ್ಲಿ ಮಾನ್ಸೂನ್ ಪರಿಸ್ಥಿತಿಯಿಂದಾಗಿ ಈ ವಾದವನ್ನು ಪಾಕ್ ಮಂಡಳಿ ಮುಂದಿಟ್ಟಿದೆ ಎಂದು ವರದಿಯಾಗಿದೆ. ಶ್ರೀಲಂಕಾದಲ್ಲಿನ ಮಳೆಯ ಪರಿಸ್ಥಿತಿಯನ್ನು ಮುನ್ನೆಲೆಗೆ ತಂದಿರುವ ಪಿಸಿಬಿ ಅಧ್ಯಕ್ಷ, ಶ್ರೀಲಂಕಾದಲ್ಲಿ ಏಷ್ಯಾಕಪ್ ಆಯೋಜನೆ ವೇಳೆ ಮಾನ್ಸೂನ್ ಆರಂಭವಾಗಿರುತ್ತದೆ. ಇದು ಪಂದ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಪಾಕಿಸ್ತಾನದಲ್ಲಿ ಇನ್ನೂ ಕೆಲವು ಪಂದ್ಯಗಳನ್ನು ಆಯೋಜನೆ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಲಿದ್ದಾರೆ ಎಂದು ವರದಿಯಾಗಿದೆ.

ಬೇಡಿಕೆಯನ್ನು ಪೂರೈಸುವ ಸಾಧ್ಯತೆ ಕಡಿಮೆ

ಈಗ ಪಿಸಿಬಿ ಎಷ್ಟೇ ಪ್ರಯತ್ನಿಸಿದರೂ ಬೇಡಿಕೆ ಈಡೇರುವ ಸಾಧ್ಯತೆ ಕಡಿಮೆ. ಏಕೆಂದರೆ ಎರಡು ಸ್ಥಳಗಳಲ್ಲಿ ಏಕಕಾಲದಲ್ಲಿ ಪಂದ್ಯಾವಳಿಗಳನ್ನು ನಡೆಸುವ ತೊಂದರೆಗಳು ಮತ್ತು ತಂಡಗಳು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸಲು ಎದುರಾಗುವ ಸಮಸ್ಯೆಗಳನ್ನು ಗಮನಿಸಿ ಎಸಿಸಿ, ಪಿಸಿಬಿ ಬೇಡಿಕೆಯನ್ನು ತಿರಸ್ಕರಿಸುವ ಸಾಧ್ಯತೆಗಳು ಹೆಚ್ಚಿವೆ.

andolanait

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

16 mins ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

17 mins ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

37 mins ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

51 mins ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

5 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

6 hours ago