ಕ್ರೀಡೆ

48 ಗಂಟೆಗಳಲ್ಲಿ ಏಕದಿನ ನಂ.1 ಸ್ಥಾನವನ್ನು ಕಳೆದುಕೊಂಡ ಪಾಕ್

ಕರಾಚಿ: ಏಕದಿನ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ನಂ.1 ತಂಡವಾಗಿ ಕಾಣಿಸಿಕೊಂಡಿದ್ದ ಪಾಕಿಸ್ತಾನ 48 ಗಂಟೆಗಳಲ್ಲಿ ತನ್ನ ಮೊದಲ ಸ್ಥಾನವನ್ನು ಕಳೆದುಕೊಂಡಿದೆ.

ಭಾನುವಾರ ಕರಾಚಿಯಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ದದ 5ನೇ ಏಕದಿನ ಪಂದ್ಯದಲ್ಲಿ ಪಾಕ್‌ 47 ರನ್‌ ಗಳಿಂದ ಸೋಲಿಗೆ ಶರಣಾಗಿರುವುದು ಇದಕ್ಕೆ ಕಾರಣವಾಗಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಕಿವೀಸ್‌ ಆಟಗಾರರು 49.3 ಓವರ್‌ ನಲ್ಲಿ 299 ರನ್‌ ಪೇರಿಸಿತ್ತು. ಗುರಿ ಬೆನ್ನಟ್ಟಲು ಬಂದ ಪಾಕ್‌ ಆಟಗಾರರು ಇಫ್ತಿಕರ್ ಅಹಮದ್ 94 ರನ್‌, ಆಘಾ ಸಲ್ಮಾನ್ ಅವರ 57 ರನ್‌ ಹೊರತಾಗಿಯೂ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಅಂತಿಮವಾಗಿ ಪಾಕ್‌ 46.1 ಓವರ್‌ ನಲ್ಲಿ 252 ರನ್‌ ಗಳಿಸಿ ಸೋಲಿಗೆ ಶರಣಾಯಿತು.

ಅಂತಿಮ ಏಕದಿನದಲ್ಲಿ ಸೋತ ಬಳಿಕ ಐಸಿಸಿ ಏಕದಿನ ರ‍್ಯಾಂಕಿಂಗ್‌ ನಲ್ಲಿ ಬದಲಾವಣೆ ಆಗಿದೆ. 113 ಅಂಕಗಳಿಸಿ ಮೊದಲ ಸ್ಥಾನದಲ್ಲಿದ್ದ ಪಾಕ್‌ 112 ಅಂಕದೊಂದಿಗೆ 3ನೇ ರ‍್ಯಾಂಕ್‌ ಗೆ ಕುಸಿದಿದೆ. ಏಕದಿನದಲ್ಲಿ ಪ್ರಾಬಲ್ಯ ಮೆರೆದಿರುವ ಆಸ್ಟ್ರೇಲಿಯ ತಂಡ 113 ಅಂಕದೊಂದಿಗೆ ಮತ್ತೆ ಮೊದಲ ಸ್ಥಾನಕ್ಕೀರಿದೆ. ಇನ್ನು ಟೀಮ್‌ ಇಂಡಿಯಾ 113 ಅಂಕದೊಂದಿಗೆ 2ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಅಂತಿಮ ಏಕದಿನದಲ್ಲಿ ಸೋತಿರುವ ಪಾಕ್‌ 4-1 ರೊಂದಿಗೆ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

7 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

7 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

8 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

14 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

14 hours ago