ಕ್ರೀಡೆ

ಏಷ್ಯಾ ಕಪ್‌ ಆತಿಥ್ಯ ಕೈ ತಪ್ಪುವ ಆತಂಕದಲ್ಲಿ ಪಾಕ್: ಗಾಳ ಬೀಸಿದ ಬಾಂಗ್ಲಾ- ಲಂಕಾ

ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ ಪಾಕಿಸ್ಥಾನದಿಂದ ಬಹುತೇಕ ಹೊರಬಿದ್ದಿದೆ.

ಈ ಬಾರಿಯ ಏಷ್ಯಾ ಕಪ್ ಕೂಟವು ಪಾಕಿಸ್ಥಾನದಲ್ಲಿ ನಡೆಯುವುದೆಂದು ನಿರ್ಧರಿಸಲಾಗಿತ್ತು. ಆದರೆ ಪಾಕಿಸ್ಥಾನಕ್ಕೆ ತಾವು ತೆರಳುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ಸ್ಪಷ್ಟ ಪಡಿಸಿದೆ. ಭಾರತವು ಯುನೈಟೆಡ್ ಅರಬ್ ಎಮಿರೇಟ್ಸ್‌ನಂತಹ ತಟಸ್ಥ ಸ್ಥಳದಲ್ಲಿ ಆಡುವುದು ಮತ್ತು ಪಾಕಿಸ್ತಾನವು ತನ್ನ ಎಲ್ಲಾ ಪಂದ್ಯಗಳನ್ನು ತವರಿನಲ್ಲಿ ಆಡುವುದರೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ಅವರು ಪಂದ್ಯಾವಳಿ ಆಡುವ ಪ್ರಸ್ತಾಪವೂ ಇತ್ತು.

ಆದರೆ ಇತ್ತೀಚಿನ ಬೆಳವಣಿಗೆಗಳ ಪ್ರಕಾರ, ಪಂದ್ಯಾವಳಿಯನ್ನು ಸಂಪೂರ್ಣವಾಗಿ ಹೊಸ ದೇಶಕ್ಕೆ ಸ್ಥಳಾಂತರಿಸಬಹುದು. ಪಂದ್ಯಾವಳಿಯನ್ನು ಆಯೋಜಿಸಲು ಶ್ರೀಲಂಕಾ ಮುಂಚೂಣಿಯಲ್ಲಿದೆ. ಬಾಂಗ್ಲಾದೇಶವೂ ಆಸಕ್ತಿ ತೋರಿದೆ.

ಮುಂದಿನ ತಿಂಗಳು ನಡೆಯುವ ಎಸಿಸಿ ಸಭೆಯಲ್ಲಿ ಹೊಸ ಆತಿಥ್ಯ ದೇಶದ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

ಕಳೆದ ಬಾರಿಯ ಏಷ್ಯಾ ಕಪ್ ಕೂಟವು ಯುಎಇ ನಲ್ಲಿ ನಡೆದಿತ್ತು. ಅಚ್ಚರಿಯ ರೀತಿಯಲ್ಲಿ ದಸುನ್ ಶನಕಾ ನಾಯಕತ್ವದ ಶ್ರೀಲಂಕಾ ತಂಡವು ಕೂಟ ಗೆದ್ದುಕೊಂಡಿತ್ತು. ಈ ಬಾರಿಯ ಏಷ್ಯಾಕಪ್ ಕೂಟ ಏಕದಿನ ಮಾದರಿಯಲ್ಲಿ ನಡೆಯಲಿದೆ.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

10 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

12 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

15 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

20 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

28 mins ago