Mysore
24
scattered clouds

Social Media

ಗುರುವಾರ, 13 ನವೆಂಬರ್ 2025
Light
Dark

ಸಾನಿಯಾ ಮಿರ್ಜಾಗೆ ಕೈಕೊಟ್ಟು, ನಟಿ ಸನಾ ಜಾವೇದ್‌ ಕೈಹಿಡಿದ ಪಾಕ್‌ ಕ್ರಿಕೆಟಿಗ ಶೋಯೆಬ್‌ ಮಲ್ಲಿಕ್‌!

ಇಸ್ಲಾಮಾಬಾದ್‌: ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲಿಕ್‌, ಪಾಕ್‌ನ ನಟಿ ಸನಾ ಜಾವೇರದ್‌ ಅವರು ಮದುವೆಯಾಗಿದ್ದಾರೆ. ಆ ಮೂಲಕ ಭಾರತೀಯ ಮಾಜಿ ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಶೋಯೆಬ್‌ ನಟಿ ಸನಾ ಜಾವೇದ್‌ ಅವರೊಂದಿಗೆ ವಿವಾಹವಾಗಿರುವ ಫೋಟೋಗಳನ್ನು ಇಂದು (ಶನಿವಾರ೦ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಭಾರೀ ವೈರಲ್‌ ಆಗುತ್ತಿವೆ.

ಕಳೆದ ಕೆಲ ದಿನಗಳಿಂದ ಶೋಯಬ್‌ ಮಲ್ಲಿಕ್‌ ಹಾಗೂ ಭಾರತದ ಟೆನ್ನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ. ಈ ಇಬ್ಬರು ವಿಚ್ಛೇದನ ಪಡೆದಿದ್ದಾರೆ ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೇ ಮಲ್ಲಿಕ್‌ ಮದುವೆಯಾಗಿರುವ ಸುದ್ದಿ ಬೆಳಕಿಗೆ ಬಂದಿದೆ.

ಸಾನಿಯಾ ಹಾಗೂ ಶೋಯೆಬ್ 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಇಬ್ಬರ ಮದುವೆ ವಿಚಾರಕ್ಕೆ ವಿವಾದವೂ ಉಂಟಾಗಿತ್ತು. ಇದೀಗ ಅವರಿಬ್ಬರ ನಡುವೆ ವಿಚ್ಛೇದನವಾಗಿದೆ ಎಂಬ ವದಂತಿಗಳಿಗೆಲ್ಲಾ ಶೋಯೆಬ್‌ ಮದುವೆ ಮೂಲಕ ಉತ್ತರ ನೀಡಿದ್ದಾರೆ.

ನಟಿ ಸನಾ ಜಾವೇದ್ ಸಹ 2020 ರಲ್ಲಿ ಉಮೈರ್ ಜಸ್ವಾಲ್ ಎಂಬವರನ್ನ ವಿವಾಹವಾಗಿದ್ದರು. ಆದರೆ ಶೀಘ್ರದಲ್ಲೇ ದಂಪತಿ ವಿಚ್ಛೇದನ ಪಡೆದಿದ್ದರು ಎನ್ನಲಾಗಿತ್ತು.

ಎರಡು ದಿನಗಳ ಹಿಂದೆಯಷ್ಟೇ ಸಾನಿಯಾ ಮಿರ್ಜಾ ಇನ್‌ಸ್ಟಾಗ್ರಾಮ್‌ನಲ್ಲಿ ʼವಿಚ್ಛೇದನ ತುಂಬಾ ಕಷ್ಟ, ಮದುವೆ ಕೂಡ ತುಂಬಾ ಕಷ್ಟ,ʼ ಎಂದು ಬರೆದುಕೊಂಡಿದ್ದರು. ಇದು ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿಚ್ಛೇದನ ಪಡೆದಿದ್ದಾರೆ ಎನ್ನಲಾಗಿದ್ದು, ಇದೀಗ ಶೋಯೆಬ್‌ ಮದುವೆಯಿಂದ ಅಧಿಕೃತವಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!