ಇಸ್ಲಾಮಾಬಾದ್: ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್, ಪಾಕ್‌ನ ನಟಿ ಸನಾ ಜಾವೇರದ್ ಅವರು ಮದುವೆಯಾಗಿದ್ದಾರೆ. ಆ ಮೂಲಕ ಭಾರತೀಯ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಶೋಯೆಬ್ ನಟಿ ಸನಾ ಜಾವೇದ್ ಅವರೊಂದಿಗೆ ವಿವಾಹವಾಗಿರುವ ಫೋಟೋಗಳನ್ನು ಇಂದು (ಶನಿವಾರ೦ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಭಾರೀ ವೈರಲ್ ಆಗುತ್ತಿವೆ.
ಕಳೆದ ಕೆಲ ದಿನಗಳಿಂದ ಶೋಯಬ್ ಮಲ್ಲಿಕ್ ಹಾಗೂ ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ. ಈ ಇಬ್ಬರು ವಿಚ್ಛೇದನ ಪಡೆದಿದ್ದಾರೆ ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೇ ಮಲ್ಲಿಕ್ ಮದುವೆಯಾಗಿರುವ ಸುದ್ದಿ ಬೆಳಕಿಗೆ ಬಂದಿದೆ.
ಸಾನಿಯಾ ಹಾಗೂ ಶೋಯೆಬ್ 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಇಬ್ಬರ ಮದುವೆ ವಿಚಾರಕ್ಕೆ ವಿವಾದವೂ ಉಂಟಾಗಿತ್ತು. ಇದೀಗ ಅವರಿಬ್ಬರ ನಡುವೆ ವಿಚ್ಛೇದನವಾಗಿದೆ ಎಂಬ ವದಂತಿಗಳಿಗೆಲ್ಲಾ ಶೋಯೆಬ್ ಮದುವೆ ಮೂಲಕ ಉತ್ತರ ನೀಡಿದ್ದಾರೆ.
ನಟಿ ಸನಾ ಜಾವೇದ್ ಸಹ 2020 ರಲ್ಲಿ ಉಮೈರ್ ಜಸ್ವಾಲ್ ಎಂಬವರನ್ನ ವಿವಾಹವಾಗಿದ್ದರು. ಆದರೆ ಶೀಘ್ರದಲ್ಲೇ ದಂಪತಿ ವಿಚ್ಛೇದನ ಪಡೆದಿದ್ದರು ಎನ್ನಲಾಗಿತ್ತು.
ಎರಡು ದಿನಗಳ ಹಿಂದೆಯಷ್ಟೇ ಸಾನಿಯಾ ಮಿರ್ಜಾ ಇನ್‌ಸ್ಟಾಗ್ರಾಮ್‌ನಲ್ಲಿ ʼವಿಚ್ಛೇದನ ತುಂಬಾ ಕಷ್ಟ, ಮದುವೆ ಕೂಡ ತುಂಬಾ ಕಷ್ಟ,ʼ ಎಂದು ಬರೆದುಕೊಂಡಿದ್ದರು. ಇದು ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿಚ್ಛೇದನ ಪಡೆದಿದ್ದಾರೆ ಎನ್ನಲಾಗಿದ್ದು, ಇದೀಗ ಶೋಯೆಬ್ ಮದುವೆಯಿಂದ ಅಧಿಕೃತವಾಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…