ಕ್ರೀಡೆ

Paris Olympics 2024: ಹಾಕಿಯಲ್ಲಿ ಬ್ರಿಡನ್‌ ಮಣಿಸಿ ಸೆಮಿಸ್‌ ಪ್ರವೇಶಿಸಿದ ಭಾರತ

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ 2024ರ ಹಾಕಿ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇಂದಿನ (ಆ.4) ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸುವ ಮೂಲಕ ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ.

ಭಾನುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಪಂದ್ಯಾವಳಿಯ ಸೆಮಿಫೈನಲ್‌ಗೆ ಪ್ರವೇಶಿಸಲು ಭಾರತವು ಗ್ರೇಟ್ ಬ್ರಿಟನ್‌ನನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಸೋಲಿಸಿ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿತು.

40 ನಿಮಿಷಗಳಿಗಿಂತ ಹೆಚ್ಚು ಕಾಲ ನಡೆದ ಈ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಕೇವಲ ಹತ್ತು ಜನರು ಮಾತ್ರ ಆಡಿದ್ದರು. ಗ್ರೇಟ್ ಬ್ರಿಟನ್ ಆಟಗಾರನ ವಿರುದ್ಧ ಸ್ಟಿಕ್ ಎತ್ತಿದ್ದಕ್ಕಾಗಿ ಅಮಿತ್ ರೋಹಿದಾಸ್ ರೆಡ್ ಕಾರ್ಡ್ ತೋರಿಸಿದ ನಂತರ ಭಾರತ ತಂಡದಲ್ಲಿ 10 ಜನ ಮಾತ್ರ ಪಂದ್ಯವನ್ನು ಆಡಿದರು.

ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯಾವಳಿಯನ್ನು ಆಡುತ್ತಿರುವ ಹಿರಿಯ ಆಟಗಾರ ಪಿಆರ್ ಶ್ರೀಜೇಶ್, ಬಲಿಷ್ಠ ಬ್ರಿಟನ್‌ ಹೊಡೆತಗಳನ್ನು ಸಮರ್ಥವಾಗಿ ತಡೆಯುವ ಮೂಲಕ ತಂಡಕ್ಕೆ ಆಸರೆಯಾದರು.

22ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಿಂದ ಹರ್ಮನ್‌ಪ್ರೀತ್ ಸಿಂಗ್ ಅವರ ಗೋಲ್‌ ಮೂಲಕ ಮುನ್ನಡೆ ಭಾರತ ಮೊದಲ ಮುನ್ನಡೆ ಸಾಧಿಸಿದರೇ, ಇದಕ್ಕೆ ಉತ್ತರವಾಗಿ 27ನೇ ನಿಮಿಷದಲ್ಲಿ ಲೀ ಮಾರ್ಟನ್ ಮೂಲಕ ಗ್ರೇಟ್ ಬ್ರಿಟನ್ ಸಮಬಲ ಸಾಧಿಸಿತು.

ಇದಾದ ಬಳಿಕ ಕೊನೆಗೆ ಪೆನಾಲ್ಟಿ ಶೂಟ್‌ಔಟ್‌ಗೆ ಪಂದ್ಯ ವಾಲಿತು. ಇದರಲ್ಲಿ ಸಮರ್ಥವಾಗಿ ಆಡಿದ ಭಾರತ 4-2 ಗೋಲುಗಳಿಂದ ಬ್ರಿಟನ್‌ ಸೋಲಿಸಿ ಸೆಮಿಸ್‌ ತಲುಪಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

9 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

11 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

14 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

15 hours ago