ಪ್ಯಾರಿಸ್: ಭಾರತದ ಸ್ಟಾರ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಮನು ಭಾಕರ್ ಈಗಾಗಲೇ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದರೆ, ಮಿಶ್ರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲೂ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಒಂದೇ ಆವೃತ್ತಿಯಲ್ಲಿ 3ನೇ ಪದಕದ ಮೇಲೆ ಗುರಿಯಿಟ್ಟಿದ್ದಾರೆ. ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಮನುಭಾಕರ್ 25 ಮೀಟರ್ ಪಿಸ್ತೂಲ್ ಮಹಿಳೆಯರ ಅರ್ಹತಾ ಸ್ಪರ್ಧೆಯಲ್ಲಿ ಫೈನಲ್ಸ್‌ಗೆ ಆಯ್ಕೆಯಾಗಿದ್ದಾರೆ ಈ ಮೂಲಕ 590 ಅಂಕಗಳನ್ನು ಗಳಿಸಿ 2 ನೇ ಸ್ಥಾನವನ್ನು ಅಲಂಕರಿಸಿದ್ದಾರೆ.
ಇವರೊಟ್ಟಿಗೆ ಭಾರತದ ಮತ್ತೊಬ್ಬ ಶೂಟರ್ ಇಶಾ ಸಿಂಗ್ ಅವರು 581 ಅಂಕಗಳಿಸಿ 18 ನೇ ಸ್ಥಾನಗಳಿಸಿದ್ದಾರೆ ಇನ್ನು ಶನಿವಾರ ನಡೆಯಲಿರುವ ಪಂದ್ಯದಲ್ಲಿ ಮನುಭಾಕರ್ ಫೈನಲ್ಸ್ ಆಡಲಿದ್ದು, ಪದಕವನ್ನು ತಮ್ಮದಾಗಿಸಿಕೊಳ್ಳುವ ಆಸೆಯಲ್ಲಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…