ಪ್ಯಾರಿಸ್: ಪ್ರತಿಷ್ಠಿತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಹಿಜಾಬ್ ಸದ್ದು ಮಾಡುತ್ತಿದ್ದು, ಈ ಬಾರಿಯ ಇಲಂಪಿಕ್ಸ್‌ನಲ್ಲಿ ಹಿಜಾಬ್ ನಷೇಧಿಸಿದ್ದಕ್ಕಾಗಿ ಪ್ಯಾರಿಸ್ ಸರ್ಕಾರದ ವಿರುದ್ಧ ಮಾನವ ಹಕ್ಕುಗಳು, ಕ್ರೀಡಾಪಟುಗಳು, ತರಬೇತಿದಾರರು ಗರಂ ಆಗಿದ್ದಾರೆ.
ಹಿಜಾಬ್ ನಿಷೇಧ ಒಲಂಪಿಕ್ಸ್‌ನ ಸ್ವಾತಂತ್ರ್ಯ ಹಾಗೂ ಸಮಾನತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಪ್ಯಾರಿಸ್ ಸರ್ಕಾರದ ನಡೆ ವಿರುದ್ಧ ಟೀಕೆಗಳು ವ್ಯಕ್ತವಾಗಿದೆ.
ಈ ಬಗ್ಗೆ ಮಾತನಾಡಿರು ಆಸ್ಟ್ರೇಲಿಯನ್ ಬಾಕ್ಸರ್ ಟೀನಾ ಹರೀಮಿ, ಹಿಜಾಬ್‌ನ್ನು ನನ್ನ ಧರ್ಮದ ಒಂದು ಭಾಗವಾಗಿ ನೋಡುತ್ತೇನೆ. ಹಾಗೆ ಅದನ್ನು ಆಚರಣೆ ಮಾಡಲು ನನಗೆ ಹೆಮ್ಮೆ ಇದೆ. ಕ್ರೀಡೆಯಲ್ಲಿ ಈ ರೀತಿ ಕ್ರಮ ಕೈಗೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರು ಹೇಳಿದ್ದಾರೆ.
ಈ ಹೇಳಿಕೆಗೆ ಪುಷ್ಠಿ ನೀಡುವಂತೆ ಉಳಿದ ಎಲ್ಲಾ ಮುಸ್ಲಿಂ ಕ್ರೀಡಾಪಟುಗಳು ಹಿಜಾಬ್ ಬ್ಯಾನ್‌ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇತ್ತ ಹಿಜಾಬ್ ಬ್ಯಾನ್ ವಿಷಯವನ್ನು ಸಮರ್ಥಿಸಿಕೊಂಡಿರುವ ಫ್ರಾನ್ಸ್ ಕ್ರೀಡಾ ಸಚಿವ ಅಮೇಲಿ ಕ್ಯಾಸ್ವರಾ, ಕ್ರೀಡಾಕೂಟದಲ್ಲಿ ಸಮಾನತೆಯನ್ನು ಕಾಪಾಡಿಕೊಳ್ಳಲು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜ್ಯಾತ್ಯಾತೀತತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…