ಪ್ಯಾರಿಸ್: ಇಲ್ಲಿ ನಡೆದ 2024ರ ಒಲಂಪಿಕ್ಸ್‌ನಲ್ಲಿ ಅನರ್ಹಗೊಂಡಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಾಟ್ ಅವರ ಪ್ರಕರಣದ ತೀರ್ಪು ಇಂದು (ಮಂಗಳವಾರ, ಆ.13) ಪ್ರಕಟವಾಗಲಿದೆ.
ತಮ್ಮ ಮೇಲಿನ ಅನರ್ಹತೆಯನ್ನು ಪ್ರಶ್ನಿಸಿದ್ದ ಫೋಗಾಟ್ ಅವರು ಕ್ರೀಡಾ ನ್ಯಾಯಮಂಡಳಿಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ಈ ಪ್ರಸಕ್ತ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪರವಾಗಿ ಮಹಿಳೆಯರ 50ಕೆಜಿ ಫ್ರೀ ಸ್ಟೈಲ್ ಕುಸ್ತಿಯಲ್ಲಿ ಭಾಗವಹಿಸಿದ್ದ ವಿನೇಶ್ ಫೋಗಟ್ ಅವರು ಫೈನಲ್ಸ್ ತಲುಪಿದ್ದರು. ಇದಾದ ಬಳಿಕ ಫೈನಲ್ಸ್‌ಗೂ ಮುನ್ನಾ ನಡೆಸಿದ ತೂಕ ಪರೀಕ್ಷೆಯಲ್ಲಿ 50 ಗ್ರಾಂ ಹೆಚ್ಚಿನ ತೂಕ ಹೊಂದಿದ್ದರು ಎಂದು ಅವರನ್ನು ಫೈನಲ್ಸ್‌ನಿಂದ ಅನರ್ಹಗೊಳಿಸಿದ್ದರು. ಇದರಿಂದಾಗಿ ಪದಕ ಖಚಿತವಾಗಿದ್ದ ಭಾರತಕ್ಕೆ ನಿರಾಸೆ ಉಂಟಾಗಿತ್ತು.
ಫೈನಲ್ಸ್ ವರೆಗೂ ದೇಹ ತೂಕ ನಿರ್ವಹಣೆ ಮಾಡಿದ್ದ ವಿನೇಶ್ ಅವರಿಗೆ ಬೆಳ್ಳಿ ಪದಕವನ್ನಾದರೂ ಕೊಡಬೇಕು ಎಂದು ಮೇಲ್ಮನವಿ ಸಲ್ಲಿಸದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಒಲಂಪಿಕ್ಸ್ ಕ್ರೀಡಾ ನ್ಯಾಯ ಮಂಡಳಿ ತೀರ್ಪನ್ನು 13ಕ್ಕೆ ಕಾದಿರಿಸಿತ್ತು.
ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…
ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…
ಕಲಬುರ್ಗಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…