ಪ್ಯಾರಿಸ್: ಜುಲೈ 26 ರಂದು ಆರಂಭಗೊಂಡ 33ನೇ ಒಲಿಂಪಿಕ್ಸ್ ಕ್ರೀಡಾ ಕೂಟಕ್ಕೆ ಇಂದು(ಆ.11) ಅದ್ದೂರಿ ತೆರೆ ಬೀಳಲಿದೆ.
ಸಮಾರೋಪ ಸಮಾರಂಭವು ಭಾರತೀಯ ಕಾಲಮಾನದ ಮಧ್ಯರಾತ್ರಿ 12:30ಕ್ಕೆ ಪ್ರಾರಂಭವಾಗಿ ನಸುಕಿನ ಜಾವ 3ರವರೆಗೆ ನಡೆಯುವ ಸಾಧ್ಯತೆ ಇದೆ.
ಸಮಾರೋಪ ಸಮಾರಂಭವು ಸಾಂಪ್ರದಾಯಿಕವಾಗಿ ಧ್ವಜಗಳ ಮೆರವಣಿಗೆಯೊಂದಿಗೆ ಪ್ರಾರಂಭವಾಗುತ್ತದೆ. ಪ್ರತಿ ರಾಷ್ಟ್ರದ ಕ್ರೀಡಾ ಪಟುಗಳು ತಮ್ಮ ದೇಶದ ಧ್ವಜದೊಂದಿಗೆ ಭಾಗವಹಿಸಲಿದ್ದಾರೆ. ಒಲಿಂಪಿಕ್ಸ್ ಪ್ರಾರಂಭವಾದಾಗಿನಿಂದ ಗ್ರೀಕ್ ಧ್ವಜಕ್ಕೆ ಮೆರವಣಿಗೆಯಲ್ಲಿ ಮೊದಲ ಸ್ಥಾನವಿದೆ.
ಇಂದಿನ ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದ ಆತಿಥೇಯ ನಗರದ ಮೇಯರ್ ಒಲಿಂಪಿಕ್ ಧ್ವಜವನ್ನು ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸುತ್ತಾರೆ. ಬಳಿಕ ಅವರು ಅದನ್ನು ಮುಂದಿನ ಆತಿಥೇಯ ನಗರದ ಮೇಯರ್‌ಗೆ ಕೊಡಲಿದ್ದಾರೆ. ಸಮಾರಂಭದಲ್ಲಿ ಅಧಿಕೃತ ಒಲಿಂಪಿಕ್ಸ್ ಧ್ವಜವನ್ನು ಸ್ವೀಕರಿಸುವ ಮೊದಲ ಕಪ್ಪು ವರ್ಣದ ಮಹಿಳೆ ಎಂಬ ಹೆಗ್ಗಳಿಕೆ ಲಾಸ್ ಏಂಜಲೀಸ್‌ನ ಮೇಯರ್ ಬಾಸ್ ಅವರದ್ದಾಗಲಿದೆ. ನಂತರ ಕೊನೆಯದಾಗಿ ಒಲಿಂಪಿಕ್ಸ್ ಜ್ಯೋತಿ ನಂದಿಸುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ಮುಕ್ತಾಯಗೊಳ್ಳಲಿದೆ.
ಈ ಬಾರಿಯ ಒಲಿಂಪಿಕ್ಸ್‌ನಲ್ಲಿ 32 ಕ್ರೀಡಾಕೂಟಗಳಲ್ಲಿ 10ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಪದಕಕ್ಕಾಗಿ ಸೆಣಸಾಟ ನಡೆಸಿದ್ದರು. ಭಾರತದಿಂದಲೂ ಒಟ್ಟು 117 ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಆದರೆ ಭಾರತಕ್ಕೆ ಈ ಬಾರಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗಲಿಲ್ಲ. ಈ ಒಲಿಂಪಿಕ್ಸ್‌ನಲ್ಲಿ ಭಾರತ 6 ಪದಕಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು. ಈ ಪೈಕಿ 1 ಬೆಳ್ಳಿ ಹಾಗೂ 5 ಕಂಚಿನ ಪದಕಗಳಾಗಿವೆ.
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…
ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…
ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…
ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…