ಕ್ರೀಡೆ

Paris Paralympics 2024: ಬ್ಯಾಡ್ಮಿಂಟನ್‌ನಲ್ಲಿ ಸೆಮಿಸ್‌ಗೆ ಲಗ್ಗೆಯಿಟ್ಟ ನಿತ್ಯಾಶ್ರೀ

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪ್ಯಾರಾ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್‌ ಪಟು ನಿತ್ಯಾಶ್ರೀ ಅವರು ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ.

ಬ್ಯಾಡ್ಮಿಂಟನ್‌ನ ಮಹಿಳೆಯರ ಸಿಂಗಲ್ಸ್‌ ಎಚ್‌ಎಚ್‌-6 ವಿಭಾಗದ ಕ್ವಾರ್ಟರ್‌ ಫೈನಲ್ಸ್‌ನಲ್ಲಿ ಪೋಲೆಂಡ್‌ನ ಒಲಿವಿಯಾ ಸ್ಮಿಗಿಲ್‌ ವಿರುದ್ಧ 21-4 ಮತ್ತು 21-7 ರ ಅಂತರಿದಂದ ಭರ್ಜರಿ ಗೆಲುವು ಕಂಡರು.

ಈ ಗೆಲುವಿನ ಮೂಲಕ ಸೆಮಿಸ್‌ ತಲುಪಿರುವ 19 ವರ್ಷದ ನಿತ್ಯಾಶ್ರೀ ಅವರು ಸೋಮವಾರ (ಸೆ.2) ರಂದು ಸೆಮಿ ಫೈನಲ್ಸ್‌ನಲ್ಲಿ ಚೀನಾದ ಲಿನ್‌ ಶುವಾಂಗ್ಬಾವೊ ವಿರುದ್ಧ ಸೆಣೆಸಾಡಲಿದ್ದಾರೆ.

ಮತ್ತೊಂದೆಡೆ ಬ್ಯಾಡ್ಮಿಂಟನ್‌ ಯುಎಸ್‌-5ನ ಸೆಮಿ ಫೈನಲ್ಸ್‌ನಲ್ಲಿ ಭಾರತೀಯರಿಬ್ಬರು ಮುಖಾಮುಖಿ ಆಗಲಿದ್ದು, ಒಂದು ಪದಕ ಖಚಿತವಾಗಲಿದೆ. ಈ ಪಂದ್ಯದಲ್ಲಿ ಮನೀಷಾ ರಾಮದಾಸ್‌ ಹಾಗೂ ಮುರುಗೇಶನ್‌ ತುಳಸಿಮತಿ ಅವರು ಸೋಮವಾರ (ಸೆ.2) ರಂದು ಸೆಮಿಸ್‌ನಲ್ಲಿ ಕಾದಾಟ ನಡೆಸಲಿದ್ದಾರೆ.

https://x.com/Media_SAI/status/1830222473859919943

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

1 hour ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

2 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

2 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

5 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

10 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

10 hours ago