ಚೆನ್ನೈ: ಭಾರತದ ಚೆಸ್ ಚತುರ ಆರ್. ಪ್ರಜ್ಞಾನಂದ ಅವರು FIDE ಚೆಸ್ ವಿಶ್ವಕಪ್‌ಗೆ ಅರ್ಹತೆ ಗಳಿಸಿ ಫೈನಲ್ ನಲ್ಲಿ ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಎದುರಿಸುವ ಮೂಲಕ ಇಡೀ ದೇಶದಲ್ಲಿ ಮನೆ ಮಾತಾಗಿದ್ದಾರೆ.
ಪಂದ್ಯಾವಳಿಯ ಉದ್ದಕ್ಕೂ, ಕೇವಲ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ಕೇಂದ್ರ ಬಿಂದುವಾಗಿರಲಿಲ್ಲ,ಅಝರ್ ಬೈಜಾನ್‌ನ ಬಾಕುನಲ್ಲಿ ನಡೆದ ಈವೆಂಟ್ ಗೆ ಅವರೊಂದಿಗೆ ಬಂದಿದ್ದ ಅವರ ತಾಯಿ ಕೂಡ ಆಕರ್ಷಣೆಯ ಕೇಂದ್ರ ಬಿಂದುವಾದರು. ವಾಸ್ತವವಾಗಿ, ಪ್ರಜ್ಞಾನಂದರ ತಾಯಿಯ ಕೆಲವು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅದರಲ್ಲಿ ಒಂದು ಚಿತ್ರ ಈಗಾಗಲೇ ಟ್ವಿಟರ್‌ನಲ್ಲಿ (ಈಗ X) 3.9 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.
ಈ ಚಿತ್ರವನ್ನು ಚೆಸ್ ಛಾಯಾಗ್ರಾಹಕಿ ಮರಿಯಾ ಎಮೆಲಿಯಾನೋವಾ ಕ್ಲಿಕ್ಕಿಸಿದ್ದಾರೆ. ಫೋಟೊವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಅವರು “ಲೆಜೆಂಡ್ ಹಾಗೂ ಅವರ ಮಗನೊಂದಿಗೆ ಸೆಲ್ಫಿ ತೆಗೆದುಕೊಂಡಿರುವೆ” ಎಂದು ಬರೆದಿದ್ದಾರೆ.
ಈ ಪೋಸ್ಟ್ ಅನ್ನು ಹಂಚಿಕೊಂಡಿರುವ ಪ್ರಜ್ಞಾನಂದ ಅವರು ಬೆಂಕಿ ಹಾಗೂ ಪ್ರೀತಿಯ ಸಂಕೇತ ಹಾಕಿ ಧನ್ಯವಾದಗಳು ಎಂದು ಬರೆದಿದ್ದಾರೆ.
ಟೈ-ಬ್ರೇಕರ್ ನಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್ ವಿರುದ್ದ ಫೈನಲ್‌ನಲ್ಲಿ ಸೋತಿದ್ದರಿಂದ ಪ್ರ ಜ್ಞಾನಂದ ಅವರು ಪಂದ್ಯಾವಳಿಯಲ್ಲಿ ರನ್ನರ್ಸ್ ಅಪ್ ಆಗಿದ್ದರು.
ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…
ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…