Mysore
20
overcast clouds
Light
Dark

ಶಮಿಯನ್ನು ತಬ್ಬಿ ಸಂತೈಸಿದ ಪ್ರಧಾನಿ: ಫೋಟೋ ವೈರಲ್‌

ಅಹ್ಮದಾಬಾದ್‌ : ಐಸಿಸಿ ವಿಶ್ವಕಪ್‌ ಉದ್ದಕ್ಕೂ ದಿಟ್ಟ ಪ್ರದರ್ಶನ ತೋರಿದ ಭಾರತ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟ್ರೋಫಿ ಗೆಲ್ಲುವಲ್ಲಿ ವಿಫಲವಾಯಿತು. ಆಸೀಸ್‌ ೬ನೇ ಟ್ರೋಫಿಗೆ ಮುತ್ತಿಕ್ಕಿತ್ತು.

೨೦೧೫ರ ನಂತರ ಆಸ್ಟ್ರೇಲಿಯಾ ತಂಡ ಮತ್ತೊಮ್ಮೆ ವಿಶ್ವಕಪ್‌ ಗೆದ್ದು ಬೀಗಿತು.

ಭಾರತ ಹೀನಾಯ ಸೋಲು ಕಂಡ ಬೆನ್ನಲ್ಲೇ ಬೌಲಿಂಗ್‌ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತದ ಸ್ಠಾರ್‌ ಆಟಗಾರ ಮಹಮದ್‌ ಶಮಿ ಭಾರತ ಪ್ರಧಾನಿ ಮಂತ್ರಿ ನರೇಂದ್ರ ಮೋದಿ  ಜೊತೆಗಿನ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಈ ಚಿತ್ರದಲ್ಲಿ ಪ್ರಧಾನಿ ಶಮಿಯನ್ನು ಸಂತೈಸುತ್ತಿರುವುದನ್ನು ನಾವು ಕಾಣಬಹುದಾಗಿದೆ.

ದುರದೃಷ್ಟವಶಾತ್ ನಿನ್ನೆ ನಮ್ಮ ದಿನವಾಗಿರಲಿಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲಾ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ಡ್ರೆಸ್ಸಿಂಗ್‌ ರೂಮ್‌ಗೆ ಬಂದು ನಮ್ಮನ್ನು ಸಂತೈಸಿದಕ್ಕಾಗಿ ಪಿಎಂ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

https://x.com/MdShami11/status/1726534405672603840?s=20

ಆರನೇ ಬಾರಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ
ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಪ್ರಶಸ್ತಿ ಗೆದ್ದಿದೆ. ಆಸ್ಟ್ರೇಲಿಯಾ ಗೆಲುವಿಗೆ 241 ರನ್‌ಗಳ ಗುರಿ ಇತ್ತು. ಆಸ್ಟ್ರೇಲಿಯಾ 43 ಓವರ್‌ಗಳಲ್ಲಿ 4 ವಿಕೆಟ್‌ಗೆ 241 ರನ್ ಗಳಿಸುವ ಮೂಲಕ ಆರನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಆಸ್ಟ್ರೇಲಿಯದ ಗೆಲುವಿನ ಹೀರೋ ಆಗಿದ್ದರು. ಟ್ರಾವಿಸ್ ಹೆಡ್ 120 ಎಸೆತಗಳಲ್ಲಿ 137 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಹೊಡೆದರು. ಈ ಅದ್ಭುತ ಇನ್ನಿಂಗ್ಸ್‌ಗಾಗಿ ಟ್ರಾವಿಸ್ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ