ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಫ್ರಾನ್ಸ್‌ಗೆ ಭೇಟಿ ನೀಡಿದ್ದಾರೆ. ಪ್ಯಾರಿಸ್ನಲ್ಲಿ ನಡೆದ ಅನಿವಾಸಿ ಭಾರತೀಯರ ಸಮಾವೇಶದಲ್ಲಿ ಭಾಗವಹಿಸಿದ್ದ ಮೋದಿ, ಕಾರ್ಯಕ್ರಮದಲ್ಲಿ ಫ್ರೆಂಚ್ ಫುಟ್ಬಾಲ್ ಸ್ಟಾರ್ ಸ್ಟ್ರೈಕರ್ ಕೈಲಿಯನ್ ಎಂಬಪ್ಪೆ ಅವರ ಗುಣಗಾನ ಮಾಡಿದ್ದಾರೆ.
ಗೋಲ್ಡನ್ ಬೂಟ್ ಗೆದ್ದಿದ್ದ ಎಂಬಪ್ಪೆ: ಫ್ರಾನ್ಸ್‌ನ ಅತ್ಯಂತ ಜನಪ್ರಿಯ ಫುಟ್‌ಬಾಲ್ ಆಟಗಾರರಲ್ಲಿ ಒಬ್ಬರಾಗಿರುವ ಕೈಲಿಯನ್ ಎಂಬಪ್ಪೆ ಪ್ರಪಂಚದಾದ್ಯಂತ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಬಾರಿ ಕತಾರ್ನಲ್ಲಿ ನಡೆದ ಫಿಫಾ ವಿಶ್ವಕಪ್ನಲ್ಲಿ ಫ್ರಾನ್ಸ್ ತಂಡವನ್ನು ಫೈನಲ್ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂಬಪ್ಪೆ, ಫೈನಲ್ ಪಂದ್ಯದಲ್ಲಿ ದಾಖಲೆಯ ಹ್ಯಾಟ್ರಿಕ್ ಗೋಲು ಬಾರಿಸಿದ್ದರು.
ಅಲ್ಲದೆ ಇದರ ಹಿಂದಿನ ಆವೃತ್ತಿ, ಅಂದರೆ ರಷ್ಯಾದಲ್ಲಿ ನಡೆದಿದ್ದ ಫಿಫಾ ವಿಶ್ವಕಪ್ನಲ್ಲಿ ಫ್ರಾನ್ಸ್ ಚಾಂಪಿಯನ್ ಆಗುವಲ್ಲಿ ಎಂಬಪ್ಪೆ ಪಾತ್ರ ಆಗಾದವಾಗಿತ್ತು. ಇನ್ನು ಕತಾರ್ ವಿಶ್ವಕಪ್ನಲ್ಲಿ ಆಡಿದ ಏಳು ಪಂದ್ಯಗಳಲ್ಲಿ 8 ಗೋಲು ಸಿಡಿಸಿದ್ದ ಎಂಬಪ್ಪೆ ಗೋಲ್ಡನ್ ಬೂಟ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು
ಭಾರತದ ಯುವಜನರಲ್ಲಿ ಸೂಪರ್‌ಹಿಟ್: ಪ್ರಸ್ತುತ ಫುಟ್ಬಾಲ್ ಜಗತ್ತಿನಲ್ಲಿ ಲಿಯೋನೆಲ್ ಮೆಸ್ಸಿ ಹಾಗೂ ಕ್ರಿಶ್ಷಿಯನೋ ರೊನಲ್ಡೋ ಬಳಿಕ ಕೇಳಿಬರುವ ಪ್ರಮುಖ ಹೆಸರೆಂದರೆ ಅದು ಕೈಲಿಯನ್ ಎಂಬಪ್ಪೆ. ಹೀಗಾಗಿ ಈ ಫ್ರೆಂಚ್ ಸ್ಟಾರ್ಗೆ ವಿಶ್ವದೆಲ್ಲೆಡೆ ಅಭಿಮಾನಿಗಳಿದ್ದಾರೆ. ಎಂಬಪ್ಪೆ ಭಾರತದಲ್ಲೂ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.
ಇದೀಗ ಫ್ರಾನ್ಸ್ ಪ್ರವಾಸದಲ್ಲಿರುವ ಮೋದಿ, ಫ್ರಾನ್ಸ್ ರಾಷ್ಟ್ರೀಯ ಫುಟ್ಬಾಲ್ ತಂಡದ ನಾಯಕ ಕೈಲಿಯನ್ ಎಂಬಪ್ಪೆ ಅವರ ಗುಣಗಾನ ಮಾಡಿದ್ದು, ಎಂಬಪ್ಪೆ ನಿಮ್ಮ ದೇಶಕ್ಕೆ ಹೋಲಿಸಿದರೆ ಭಾರತದಲ್ಲಿ ಹೆಚ್ಚು ಹೆಸರುವಾಸಿಯಾಗಿದ್ದಾರೆ ಎಂದು ಹೇಳಿದರು.
“ಫ್ರೆಂಚ್ ಫುಟ್ಬಾಲ್ ಆಟಗಾರ ಕೈಲಿಯನ್ ಎಂಬಪ್ಪೆ ಭಾರತದ ಯುವಜನರಲ್ಲಿ ಸೂಪರ್‌ಹಿಟ್ ಆಗಿದ್ದಾರೆ. ಬಹುಶಃ ಫ್ರಾನ್ಸ್‌ಗಿಂತ ಭಾರತದಲ್ಲಿ ಹೆಚ್ಚಿನ ಜನರಿಗೆ ಎಂಬಪ್ಪೆ ಪರಿಚಿತರಾಗಿದ್ದಾರೆ” ಎಂದು ಪ್ಯಾರಿಸ್‌ನ ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಿ ಮೋದಿ ಹೇಳಿದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…