ನವದೆಹಲಿ : ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿರುವ 4-400 ರಿಲೇ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಮೂಲಕ ಶ್ಲಾಘಿಸಿದರು.
ಮುಹಮ್ಮದ್ ಅನಸ್, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತದ ರಿಲೇ ತಂಡವು ಶನಿವಾರ ಏಶ್ಯನ್ ದಾಖಲೆಯನ್ನು ಮುರಿದು ಹೀಟ್-1ರಲ್ಲಿ ಅಮೆರಿಕದ ನಂತರ 2ನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದಿದೆ. ಭಾನುವಾರ ತಡರಾತ್ರಿ ಫೈನಲ್ ಪಂದ್ಯವನ್ನು ಆಡಲಿದೆ.
ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನಂಬಲಾಗದ ಟೀಮ್ ವರ್ಕ್! ಅನಸ್, ಅಮೋಜ್, ರಾಜೇಶ್ ರಮೇಶ್ ಹಾಗೂ ಮುಹಮ್ಮದ್ ಅಜ್ಮಲ್ ಅವರು 4-400 ಮೀ. ರಿಲೇಯಲ್ಲಿ ಹೊಸ ಏಶ್ಯನ್ ದಾಖಲೆ ನಿರ್ಮಿಸಿ ಫೈನಲ್‌ಗೆ ಪ್ರವೇಶಿಸಿದ್ದಾರೆ.
ಇದು ವಿಜಯೋತ್ಸಾಹದ ಪುನರಾಗಮನವಾಗಿ ನೆನಪಿನಲ್ಲಿ ಉಳಿಯುತ್ತದೆ. ಭಾರತೀಯ ಅತ್ಲೆಟಿಕ್ಸ್ ಪಾಲಿಗೆ ಇದು ನಿಜವಾಗಿಯೂ ಐತಿಹಾಸಿಕ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…
ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…