ಕ್ರೀಡೆ

ಇಂದಿನಿಂದ ಪ್ರೋ ಕಬಡ್ಡಿ ಅಬ್ಬರ ಶುರು

ಅಹಮದಾಬಾದ್‌ : ಇಂದಿನಿಂದ ಪ್ರೋ ಕಬಡ್ಡಿ ಸೀಸನ್‌ 10 ಆರಂಭವಾಗಲಿದ್ದು, ಬರೋಬ್ಬರಿ ಮೂರು ತಿಂಗಳುಗಳ ಕಾಲ ಕ್ರೀಡಾಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಲಿದೆ.

ವರ್ಲ್ಡ್‌ ಕಪ್‌ ಕೈ ತಪ್ಪಿದ ಹತಾಶೆಯಲ್ಲಿದ್ದ ಕ್ರೀಡಾಭಿಮಾನಿಗಳಿಗೆ ಪ್ರೋ ಕಬಡ್ಡಿ ನವ ಚೈತನ್ಯವನ್ನು ನೀಡಿದೆ.

ಕೋವಿಡ್‌ ನಂತರ ಕೆಲವೇ ಕೆಲವು ಕೇಂದ್ರಗಳಿಗೆ ಮಾತ್ರ ಸೀಮಿತವಾಗಿದ್ದ ಕಬಡ್ಡಿ ಪಂದ್ಯಾಟಗಳು ಈ ಬಾರಿ 12 ಫ್ರಾಂಚೈಸಿಗಳ ಕೇಂದ್ರದಲ್ಲಿಯೂ ಕೂಡ ನಡೆಯಲಿವೆ.

ಪ್ರತಿ ದಿನ 2 ಪಂದ್ಯಗಳು ಪ್ರೇಕ್ಷಕರನ್ನು ರಂಜಿಸಲಿವೆ. ರಾತ್ರಿ 8 ಗಂಟೆಗೆ ಮೊದಲ ಪಂದ್ಯ ಆರಂಭವಾಗಲಿದ್ದು, ಎರಡನೇ ಪಂದ್ಯ ರಾತ್ರಿ 9 ಗಂಟೆಗೆ ಆರಂಭವಾಗಲಿದ್ದು, ಪಂದ್ಯಾವಳಿಗಳು ಸ್ಟಾರ್‌ ಸ್ಪೋರ್ಟ್ಸ್‌ ನಲ್ಲಿ ನೇರಪ್ರಸಾರವಾಗಲಿದೆ.

ಪ್ರೋ ಕಬಡ್ಡಿ ಸೀಸನ್‌ 10 ರ ಜಾಹಿರಾತು ಕ್ರಿಡಾಭಿಮಾನಿಗಳ ಜೋಶ್‌ ಹೆಚ್ಚಿಸಿತ್ತು. ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್‌ ಬಾದ್‌ ಶಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಈ ಜಾಹಿರಾತಿನ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಕಿಚ್ಚ ಸುದೀಪ್‌ ಹೊಳೆಯುತ್ತಿರುವ ಬೆಳಗಿನ ಸೂರ್ಯ ರಶ್ಮಿಯ ಬೇಳಕಲ್ಲಿ ಬೆಳ್ಳನೆ ಕುದುರೆಯೇರಿ ರೋಶಾವೇಶದಿಂದ ಬರುತ್ತಾರೆ.

ಈ ಜಾಹಿರಾತನ್ನು ಯಾವುದೇ ಸಿನಿಮಾಗೂ ಕಮ್ಮಿ ಇಲ್ಲದಂತೆ ಶೂಟ್‌ ಮಾಡಲಾಗಿದೆ. ಈ ವಿಡಿಯೋದ ಆರಂಭದಲ್ಲಿ ಕಿಚ್ಚ ಯಾವುದೋ ಯುದ್ಧಕ್ಕೆ ಹೋಗುತ್ತಿರುವ ಖದರ್‌ ನಲ್ಲಿ ಬಿಳಿ ಬಣ್ಣದ ಕುದುರೆಯೇರಿ ರಾಜನಂತೆ ಬರುತ್ತಾರೆ. ನಟ ಬಾಲಯ್ಯ ಕೂಡ ಎದುರಿನಿಂದ ಮತ್ತೊಂದು ಕುದುರೆಯೇರಿ ಬರುತ್ತಾರೆ. ಇವರಿಬ್ಬರೂ ಮುಖಾಮುಖಿಯಾಗಿ ಜಗಜ್ಜೆಟ್ಟಿಗಳಂತೆ ಕಾದಾಡುವಾಗ ಕಬಡ್ಡಿ ನಮ್ದು ಎನ್ನುವ ಸಾಲು ಬರುತ್ತದೆ.

ಇನ್ನು ಈ ವಿಡಿಯೋವನ್ನು ಹಂಚಿಕೊಂಡಿದ್ದ ಬೆಂಗಳೂರು ಬುಲ್ಸ್‌ ತಂಡದ ರಾಯಭಾರಿ ಕಿಚ್ಚ ಸುದೀಪ್‌, ಬರ್ಕಯ್ಯ. ಪೇಪರ್‌ ಮುಂದಾಗಡೆ ಬರ್ಕೋ. ಕಬಡ್ಡಿ ನಮ್ದು. ನೋಡಿರಿ ಪ್ರೋ ಕಬಡ್ಡಿ ಲೀಗ್‌ ಡಿಸೆಂಬರ್‌ 2 ರಾತ್ರಿ 8 ರಿಂದ ನಿಮ್ಮ ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಡಿಸ್ನಿ ಪ್ಲಸ್‌ ಹಾಟ್ ಸ್ಟಾರ್‌ ನಲ್ಲಿ ಎಂದು ಬರೆದುಕೊಂಡಿದ್ದರು.

ಇದೀಗ ಪ್ರೋ ಕಬಡ್ಡಿ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು. ಕ್ರೀಡಾಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ.

lokesh

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

10 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

13 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

14 hours ago