ಕ್ರೀಡೆ

IPL 2024: ಶಶಾಂಕ್‌ ಅಮೋಘ ಅರ್ಧಶತಕದಾಟ: ಜಿಟಿ ವಿರುದ್ಧ ಪಂಜಾಬ್‌ಗೆ ಭರ್ಜರಿ ಜಯ!

ಅಹಮದಾಬಾದ್‌: ಶಶಾಂಕ್‌ ಸಿಂಗ್‌ ಅವರ ಏಕಾಂಗಿ ಹೋರಾಟದ ಫಲವಾಗಿ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ಮೂರು ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಪಂಜಾಬ್‌ 19.5 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 200 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಗುಜರಾತ್‌ ಇನ್ನಿಂಗ್ಸ್‌: ಪಂಜಾಬ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಗಿಲ್ (89*) ಆಕರ್ಷಕ ಅರ್ಧಶತಕ ಗಳಿಸಿದರು. ಅವರಿಗೆ ಕೇನ್ ವಿಲಿಯನ್ (26) ಹಾಗೂ ಸಾಯ್ ಸುದರ್ಶನ್ (33) ಸಹಕರಿಸಿದರು. ಉಳಿದಂತೆ ವೃದ್ಧಿಮಾನ್ ಸಹಾ 11 ಹಾಗೂ ವಿಜಯ್ ಶಂಕರ್ 8 ರನ್ ಗಳಿಸಿದರು. ಕೊನೆಯ ಹಂತದಲ್ಲಿ ರಾಹುಲ್ ತೆವಾಟಿಯಾ 8 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ ಅಜೇಯ 23 ರನ್ ಗಳಿಸಿ ತಂಡದ ಅಂಕ ಇನ್ನೂರರ ಗಡಿ ದಾಟಲು ಸಹಕರಿಸಿದರು.

ಪಂಜಾಬ್‌ ಪರ ಕಗಿಸೋ ರಬಾಡ ಎರಡು ವಿಕೆಟ್ ಗಳಿಸಿದರು. ಹರ್ಪ್ರೀತ್‌ ಬ್ರಾರ್‌ ಹಾಗೂ ಹರ್ಷಲ್‌ ಪಟೇಲ್‌ ತಲಾ ಒಂದು ವಿಕೆಟ್‌ ಕಿತ್ತರು.

ಪಂಜಾಬ್‌ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಪಂಜಾಬ್‌ಗೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಶಿಖರ್‌ ಧವನ್‌ ಕೇವಲ ಒಂದು ರನ್‌ ಗಳಿಸಿ ಬಂದ ಹಾದಿಯಲ್ಲೇ ಹಿಂತಿರುಗಿದರು. ಬಳಿಕ ಬೇರ್‌ಸ್ಟೋ ಜೊತೆಯಾದ ಪ್ರಭ್‌ಸಿಮ್ರಾನ್‌ ಕೆಲಕಾಲ ಜಿಟಿ ಬೌಲರ್‌ಗಳನ್ನು ಕಾಡಿದರು. ಈ ಇಬ್ಬರು ಕ್ರಮವಾಗಿ 22 ಮತ್ತು 35 ರನ್‌ ಗಳಿಸಿ ಇಬ್ಬರು ನೂರ್‌ ಅಹ್ಮದ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಉಳಿದಂತೆ ಸ್ಯಾಮ್‌ ಕರನ್‌ 5, ಸಿಕಂದರ್‌ ರಾಜಾ 15, ಜಿತೇಶ್‌ ಶರ್ಮಾ 16 ರನ್‌ ಕೆಲಹಾಕಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ನೆಲಕಚ್ಚಿ ಆಟವಾಡಿದ ಶಶಾಂಕ್‌ ಸಿಂಗ್‌ ದಿಟ್ಟ ಹೋರಾಟ ತೋರಿದರು. ಇವರಿಗೆ ಅಶುತೋಷ್‌ ಉತ್ತಮ ಜೊತೆಯಾಟ ನೀಡಿದರು. ಅಶುತೋಷ್ 17 ಎಸೆತ 3 ಬೌಂಡರಿ 1 ಸಿಕ್ಸರ್‌ ಸೇರಿ 31 ರನ್‌ ಬಾರಿಸಿ ನಲ್ಕಂಡೆಗೆ ವಿಕೆಟ್‌ ಒಪ್ಪಿಸಿದರು.

ಆದರೆ ಪಂದ್ಯದುದ್ದಕ್ಕೂ ಉತ್ತಮ ಆಟವಾಡಿದ ಶಶಾಂಕ್‌ ಸಿಂಗ್‌ ತಂಡದ ಗೆಲುವಿಗೆ ಏಕಾಂಗಿ ಹೋರಾಟ ನಡೆಸಿದರು. ಕೇವಲ 29ಎಸೆತ ಎದುರಿಸಿ 6 ಬೌಂಡರಿ 4 ಸಿಕ್ಸರ್‌ ಸಹಿತ 61 ರನ್‌ ಗಳಿಸಿ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಗುಜರಾತ್‌ ಪರ ನೂರ್‌ ಅಹ್ಮದ್‌ 2, ಓಮರ್ಜಾಯಿ, ಉಮೇಶ್‌ ಯಾದವ್‌, ರಶೀದ್‌ ಖಾನ್‌, ಮೋಹಿತ್‌ ಶರ್ಮಾ ಮತ್ತು ನಲ್ಕಂಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

2 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

2 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

2 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

3 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

5 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

10 hours ago