ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ, ಭಾರತದಲ್ಲಿ ಪಾಕ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ ಬಹಿಷ್ಕರಿಸಬೇಕು ಎಂಬ ಕೂಗು.
ಏಷ್ಯಾಕಪ್ನ ವೇಳಾಪಟ್ಟಿ ಪ್ರಕಟವಾದಗಿನಿಂದಲೂ ಈ ಪಂದ್ಯದ ಬಗ್ಗೆ ಅಪಸ್ವರ ಕೇಳಿಬರುತ್ತಲೇ ಇದೆ. ಇದೀಗ ಪಂದ್ಯ ಹತ್ತಿರವಾದಂತೆ ರಾಜಕೀಯ ಪಕ್ಷಗಳಿಂದ ಹಿಡಿದು ಸಾರ್ವಜನಿಕರು ಕೂಡ ಈ ಪಂದ್ಯವನ್ನು ಟೀಂ ಇಂಡಿಯಾ ಆಡಬಾರದು ಎಂಬ ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಭಾರತದಲ್ಲಿನ ಈ ವಾತಾವರಣ ಆಟಗಾರರ ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಪಂದ್ಯಕ್ಕೂ ಮುನ್ನ ಆಟಗಾರರ ಮನೋಬಲವನ್ನು ಹೆಚ್ಚಿಸಲು ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಆಟಗಾರರಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.
ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಒಂದು ದಿನ ಮೊದಲು ಪತ್ರಿಕಾಗೋಷ್ಠಿ ನಡೆದಿತು. ಈ ಪತ್ರಿಕಾಗೋಷ್ಠಿಯಲ್ಲಿ ಟೀಂ ಇಂಡಿಯಾದ ಯಾವ ಆಟಗಾರನೂ ಹಾಜರಿರಲಿಲ್ಲ. ಆಟಗಾರರ ಬದಲಿಗೆ ತಂಡದ ಪರವಾಗಿ ಸಹಾಯಕ ಕೋಚ್ ರಯಾನ್ ಟೆನ್ಡೋಸ್ಚೇಟ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮುಖ್ಯ ಕೋಚ್ ಗೌತಮ್ ಗಂಭೀರ್ ಆಟಗಾರರು ಪಂದ್ಯದ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸುವಂತೆ ಕೇಳಿಕೊಂಡಿದ್ದಾರೆ. ಭಾರತದಲ್ಲಿ ಈ ಪಂದ್ಯದ ಬಗ್ಗೆ ಯಾವ ರೀತಿಯ ಅಭಿಪ್ರಾಯ ಕೇಳಿಬರುತ್ತಿದೆ ಎಂಬುದು ನಮಗೆ ತಿಳಿದಿದೆ.
ಆದರೆ ನಾವು ಭಾವನೆಗಳನ್ನು ಬದಿಗಿಟ್ಟು, ವೃತ್ತಿಪರರಾಗಿರಬೇಕು. ಆಟದ ಮೇಲೆ ಮಾತ್ರ ಗಮನವನ್ನು ಕೇಂದ್ರೀಕರಿಸಬೇಕು. ಪ್ರತಿಯೊಬ್ಬರೂ ವಿಭಿನ್ನ ಅಭಿಪ್ರಾಯವನ್ನು ಹೊಂದಿರುತ್ತಾರೆ ಆದರೆ ತಂಡದ ಗಮನ ಕ್ರಿಕೆಟ್ ಮೇಲೆ ಮಾತ್ರ ಇರಬೇಕು. ಇದು ಸೂಕ್ಷ್ಮ ವಿಷಯ. ಏಷ್ಯಾಕಪ್ ಬಹಳ ದಿನಗಳಿಂದ ಚರ್ಚೆಯ ವಿಷಯವಾಗಿತ್ತು. ಒಂದು ಸಮಯದಲ್ಲಿ ನಾವು ಈ ಪಂದ್ಯಾವಳಿಯಲ್ಲಿ ಆಡುವುದಿಲ್ಲ ಎಂದು ಭಾವಿಸಿದ್ದೇವು. ಆದರೆ ನಮಗೆ ಆಡುವ ಅವಕಾಶ ಸಿಕ್ಕಿದೆ. ಹೀಗಾಗಿ ಆಟಗಾರರು ಭಾವನೆಗಳನ್ನು ಬದಿಗಿಟ್ಟು ತಮ್ಮ ಕೆಲಸವನ್ನು ಮಾಡಬೇಕು ಎಂಬ ವಿಶೇಷ ಸಂದೇಶ ನೀಡಿದ್ದಾರೆ ಎಂದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…