ಕ್ರೀಡೆ

ಭಾವನೆ ಬದಿಗಿಟ್ಟು, ವೃತ್ತಿಪರರಾಗಿ ಆಡಿ : ಆಟಗಾರರಿಗೆ ಗಂಭೀರ್‌ ಸಂದೇಶ

ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್​​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ, ಭಾರತದಲ್ಲಿ ಪಾಕ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ ಬಹಿಷ್ಕರಿಸಬೇಕು ಎಂಬ ಕೂಗು.

ಏಷ್ಯಾಕಪ್​ನ ವೇಳಾಪಟ್ಟಿ ಪ್ರಕಟವಾದಗಿನಿಂದಲೂ ಈ ಪಂದ್ಯದ ಬಗ್ಗೆ ಅಪಸ್ವರ ಕೇಳಿಬರುತ್ತಲೇ ಇದೆ. ಇದೀಗ ಪಂದ್ಯ ಹತ್ತಿರವಾದಂತೆ ರಾಜಕೀಯ ಪಕ್ಷಗಳಿಂದ ಹಿಡಿದು ಸಾರ್ವಜನಿಕರು ಕೂಡ ಈ ಪಂದ್ಯವನ್ನು ಟೀಂ ಇಂಡಿಯಾ ಆಡಬಾರದು ಎಂಬ ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಭಾರತದಲ್ಲಿನ ಈ ವಾತಾವರಣ ಆಟಗಾರರ ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಪಂದ್ಯಕ್ಕೂ ಮುನ್ನ ಆಟಗಾರರ ಮನೋಬಲವನ್ನು ಹೆಚ್ಚಿಸಲು ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್​ ಆಟಗಾರರಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.

ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಒಂದು ದಿನ ಮೊದಲು ಪತ್ರಿಕಾಗೋಷ್ಠಿ ನಡೆದಿತು. ಈ ಪತ್ರಿಕಾಗೋಷ್ಠಿಯಲ್ಲಿ ಟೀಂ ಇಂಡಿಯಾದ ಯಾವ ಆಟಗಾರನೂ ಹಾಜರಿರಲಿಲ್ಲ. ಆಟಗಾರರ ಬದಲಿಗೆ ತಂಡದ ಪರವಾಗಿ ಸಹಾಯಕ ಕೋಚ್ ರಯಾನ್ ಟೆನ್​ಡೋಸ್ಚೇಟ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮುಖ್ಯ ಕೋಚ್ ಗೌತಮ್ ಗಂಭೀರ್ ಆಟಗಾರರು ಪಂದ್ಯದ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸುವಂತೆ ಕೇಳಿಕೊಂಡಿದ್ದಾರೆ. ಭಾರತದಲ್ಲಿ ಈ ಪಂದ್ಯದ ಬಗ್ಗೆ ಯಾವ ರೀತಿಯ ಅಭಿಪ್ರಾಯ ಕೇಳಿಬರುತ್ತಿದೆ ಎಂಬುದು ನಮಗೆ ತಿಳಿದಿದೆ.

ಆದರೆ ನಾವು ಭಾವನೆಗಳನ್ನು ಬದಿಗಿಟ್ಟು, ವೃತ್ತಿಪರರಾಗಿರಬೇಕು. ಆಟದ ಮೇಲೆ ಮಾತ್ರ ಗಮನವನ್ನು ಕೇಂದ್ರೀಕರಿಸಬೇಕು. ಪ್ರತಿಯೊಬ್ಬರೂ ವಿಭಿನ್ನ ಅಭಿಪ್ರಾಯವನ್ನು ಹೊಂದಿರುತ್ತಾರೆ ಆದರೆ ತಂಡದ ಗಮನ ಕ್ರಿಕೆಟ್ ಮೇಲೆ ಮಾತ್ರ ಇರಬೇಕು. ಇದು ಸೂಕ್ಷ್ಮ ವಿಷಯ. ಏಷ್ಯಾಕಪ್ ಬಹಳ ದಿನಗಳಿಂದ ಚರ್ಚೆಯ ವಿಷಯವಾಗಿತ್ತು. ಒಂದು ಸಮಯದಲ್ಲಿ ನಾವು ಈ ಪಂದ್ಯಾವಳಿಯಲ್ಲಿ ಆಡುವುದಿಲ್ಲ ಎಂದು ಭಾವಿಸಿದ್ದೇವು. ಆದರೆ ನಮಗೆ ಆಡುವ ಅವಕಾಶ ಸಿಕ್ಕಿದೆ. ಹೀಗಾಗಿ ಆಟಗಾರರು ಭಾವನೆಗಳನ್ನು ಬದಿಗಿಟ್ಟು ತಮ್ಮ ಕೆಲಸವನ್ನು ಮಾಡಬೇಕು ಎಂಬ ವಿಶೇಷ ಸಂದೇಶ ನೀಡಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

5 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

6 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

7 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

10 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

11 hours ago