ಕ್ರೀಡೆ

Paris Olympics 2024: ಒಲಿಂಪಿಕ್ಸ್‌ ನಲ್ಲಿ ಪಯಣ ಅಂತ್ಯಗೊಳಿಸಿದ ಪಿವಿ ಸಿಂಧು

ಪ್ಯಾರಿಸ್‌: ಭಾರತದ ಪ್ರಮುಖ ಷಟ್ಲರ್ ಖ್ಯಾತಿಯ ಪಿವಿ ಸಿಂಧು ಅವರ ಮೂರನೇ ಒಲಿಂಪಿಕ್ಸ್ ಪದಕ ಗೆಲ್ಲುವ ಕನಸು ನುಚ್ಚುನೂರಾಗಿದೆ.

ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಪ್ರಿ-ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಚೀನಾದ ಷಟ್ಲರ್ ಹೀ ಬಿಂಗ್ ಝಾವೋ ವಿರುದ್ಧ ಪಿವಿ ಸಿಂಧು ಹೀನಾಯ ಸೋಲನುಭವಿಸುವ ಮೂಲಕ ತಮ್ಮ ಅಭಿಯಾನವನ್ನು ಮುಗಿಸಿದ್ದಾರೆ.

ಸಿಂಧು ಎದುರು 19-21, 14-21 ಅಂತರದಲ್ಲಿ ಬಿಂಗ್ ಝಾವೋ ಗೆಲುವು ಸಾಧಿಸಿದರು. ಸತತ ಎರಡು ಸೆಟ್ಗಳಲ್ಲಿ ಪ್ರಾಬಲ್ಯ ಸಾಧಿಸುವ ಮೂಲಕ ಝಾವೊ ಅವರು ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ಸ್‌ಗೆ ಲಗ್ಗೆ ಇಟ್ಟರು.

ಇನ್ನು ಕಳೆದ ಎರಡು ಭಾರಿ ರಿಯೊ ಡಿ ಜನೈರೊ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಮತ್ತು ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದ ಪಿವಿ ಸಿಂಧು ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ತನ್ನ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿ ಕನಸನ್ನು ಭಗ್ನಗೊಳಿಸಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್ ಕಾರ್ಟೂನ್

ಮಹಾಪಂಚ್ ಕಾರ್ಟೂನ್ | ಡಿಸೆಂಬರ್ 13 ಶನಿವಾರ  

13 mins ago

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

13 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

14 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

14 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

14 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

14 hours ago