ಕ್ರೀಡೆ

Paris Olympics 2024: ಬ್ಯಾಡ್ಮಿಂಟನ್‌; ಮೊದಲ ಗೆಲುವು ದಾಖಲಿಸಿದ ಪಿವಿ ಸಿಂಧು

ಪ್ಯಾರಿಸ್‌: ವಿಶ್ವವಿಖ್ಯಾತ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಅವರು ಮೊದಲ ಗೆಲುವು ದಾಖಲಿಸಿದ್ದಾರೆ.

ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ತಮ್ಮ ಮೊದಲ ಪಂದ್ಯದಲ್ಲಿ ಮಾಲ್ಡೀವ್ಸ್‌ನ ಎಫ್‌.ಎನ್‌ ಅಬ್ದುಲ್‌ ರಝಾಕ್‌ ಅವರ ವಿರುದ್ಧ ನೇರ ಸೆಟ್‌ಗಳಿಂದ ಗೆದ್ದ ಪಿವಿ ಸಿಂಧೂ ಈ ಕ್ರೀಡಾಕೂಟದಲ್ಲಿ ಶುಭಾರಂಭ ಮಾಡಿದರು.

ಆರಂಭದಿಂದಲೇ ಆಕ್ರಮಣಕಾರಿ ಆಟದ ಮೂಲಕ ಪಂದ್ಯವನ್ನು ತನ್ನತ್ತ ವಾಲಿಸಿಕೊಂಡ ಸಿಂಧು ಮೊದಲೆರೆಡು ಸೆಟ್‌ಗಳಲ್ಲಿ 21-9 21-6 ಮೂಲಕ ಎದುರಾಲಿಯನ್ನು ಬಗ್ಗು ಬಡಿದು ಮುಂದಿನ ಸುತ್ತಿಗೆ ಆಯ್ಕೆಯಾದರು.

ಜುಲೈ. 31ರ ಬುಧವಾರದಂದು ಪಿವಿ ಸಿಂಧೂ ಎಸ್ಟೋನಿಯಾದ ಕ್ರಿಸ್ಟಿನ್‌ ಕೂಬಾ ಅವರ ವಿರದ್ಧ ಸೆಣೆಸಾಡಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

14 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

29 mins ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

42 mins ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

45 mins ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

50 mins ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

57 mins ago