ನಾರ್ವೆ: ಭಾರತದ 18 ವರ್ಷದ ಯುವ ಗ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ, ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ಟನ್ ಎದುರು ಮೊದಲ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾರ್ವೆ ಚೆಸ್ ಟೂರ್ನಮೆಂಟ್‌ನ 3ನೇ ಸುತ್ತಿನ ಸ್ಪರ್ಧೆಯಲ್ಲಿ ಆರ್.ಪ್ರಜ್ಞಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಆರು ಅಗ, ಚೆಸ್ ಆಟಗಾರರು ಪಾಲ್ಗೊಂಡಿರುವ ಪ್ರತಿಷ್ಠಿತ ಚೆಸ್ ಟೂರ್ನಮೆಂಟ್‌ನಲ್ಲಿ ಬಿಳಿ ಕಾಯಿನ್ ಮುನ್ನಡೆಸಿದ ಪ್ರಜ್ಞಾನಂದ, ನಾರ್ವೆಯವರೇ ಆದ ವಿಶ್ವ ನಂ.1 ಶ್ರೇಯಾಂಕಿತ ಆಟಗಾರ ಮ್ಯಾಗ್ನಸ್ ಕಾರ್ಲ್ ಸನ್ ಅವರಿಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರನೇ ಸುತ್ತಿನ ಸ್ಪರ್ಧೆಯಲ್ಲಿ ಪ್ರಜ್ಞಾನಂದ 9 ಅಂಕಗಳ ಪೈಕಿ 5.5 ಅಂಕಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ದಾಖಲಿಸಿದರು.
ಕಳೆದ ವರ್ಷ ನಡೆದ ಫಿಡೆ ಚೆಸ್ ವಿಶ್ವಕಪ್‌ನಲ್ಲಿ ಆರ್ ಪ್ರಜ್ಞಾನಂದ, ಮ್ಯಾಗ್ನಸ್ ಕಾರ್ಲ್‌ನ್‌ಗೆ ಶರಣಾಗಿದ್ದರು. ಇದೀಗ ಆ ಸೋಲಿಗೆ ನಾರ್ವೆಯಲ್ಲಿ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಮ್ಯಾಗ್ನಸ್ ಕಾರ್ಲ್ ಸನ್ ಸೋಲಿಸಿದ ಭಾರತದ 4ನೇ ಚೆಸ್ ಪಟು ಎನ್ನುವ ಹಿರಿಮೆಗೆ ಆ ಪ್ರಜ್ಞಾನಂದ ಪಾತ್ರರಾಗಿದ್ದಾರೆ. ಇನ್ನು ಕುತೂಹಲಕಾರಿ ಸಂಗತಿಯೆಂದರೆ, ಆರ್.ಪ್ರಜ್ಞಾನಂದ ಅವರ ಸಹೋದರಿ ಆರ್. ವೈಶಾಲಿ, ನಾರ್ವೆ ಚೆಸ್ ಮಹಿಳಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಆಗ ಶ್ರೇಯಾಂಕ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.