ನವದೆಹಲಿ: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತವನ್ನು ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತೀಯ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗಿದೆ. ಅದರಂತೆ 5 ಕೋಟಿ ರೂ ಬಹುಮಾನ ಮೊತ್ತ ಪಡೆದಿರುವ ರಾಹುಲ್ ದ್ರಾವಿಡ್ ತಮ್ಮ ಹಣದಲ್ಲಿ ಕಡಿತ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ.
ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತ ನೀಡಿದೆ. ಈ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ. ಇಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ತಲಾ 5 ಕೋಟಿ ರೂ ನೀಡಲಾಗಿದೆ. ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ ನಿಗದಿ ಮಾಡಲಾಗಿದೆ.
ಆದರೆ ಸಿಬ್ಬಂದಿ ವರ್ಗಗಳ ಭಾಗವಾಗಿರುವ ಕೋಚ್ ರಾಹುಲ್ ದ್ರಾವಿಡ್ ಇದೀಗ ಹೆಚ್ಚುವರಿ ಬಹುಮಾನ ಮೊತ್ತವನ್ನು ಪಡೆಯಲು ನಿರಾಕರಿಸಿದ್ದಾರೆ. ಇತರೆ ಸಿಬ್ಬಂದಿಗಳಂತೆ ತಾನು ಸಹ 2.5 ಕೋಟಿ ರೂ ಬಹುಮಾನ ಮೊತ್ತವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐಗೆ ತಿಳಿಸಿದ್ದಾರೆ.
ಬಿಸಿಸಿಐ ಸಿದ್ಧಪಡಿಸಿದ ಬಹುಮಾನ ಮೊತ್ತ ವಿತರಣಾ ಸೂತ್ರದ ಪ್ರಕಾರ ರಾಹುಲ್ ದ್ರಾವಿಡ್ ಜೊತೆಗೆ ಭಾರತ ತಂಡದ 15 ಆಟಗಾರರು ತಲಾ 5 ಕೋಟಿ ರೂ ಪಡೆದಿದ್ದಾರೆ. ಹಾಗೆಯೇ ಸಹಾಯಕ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ ನಿಗದಿ ಮಾಡಲಾಗಿದೆ.
ಇಲ್ಲಿ ರಾಹುಲ್ ದ್ರಾವಿಡ್ ಜೊತೆ ಕಾರ್ಯ ನಿರ್ವಹಿಸಿದ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಅವರಿಗೆ ತಲಾ 2.5 ಕೋಟಿ ರೂ ನಿಗದಿ ಮಾಡಲಾಗಿದೆ.
ಈ ಅಸಮಾನತೆಯನ್ನು ಹೋಗಲಾಡಿಸಲು ಖುದ್ದು ರಾಹುಲ್ ದ್ರಾವಿಡ್ 2.5 ಕೋಟಿ ರೂ ಕಡಿತಗೊಳಿಸಲು ಮುಂದಾಗಿದ್ದಾರೆ. ಅಲ್ಲದೇ ಇತರೆ ಸಿಬ್ಬಂದಿಗಳಂತೆ ನಾನು ಸಹ 2.5 ಕೋಟಿ ರೂ ಬಹುಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐ ಅಧಿಕಾರಿಗೆ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.
ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…
ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…
ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…
ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…