ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 19ನೇ ಪಂದ್ಯದಲ್ಲಿ ಜಾಸ್ ಬಟ್ಲರ್ ಅವರ ಅಮೋಘ ಶತಕದಾಟ ಹಾಗೂ ನಾಯಕ ಸಂಜು ಸ್ಯಾಮ್ಸನ್ ಅವರ ಅರ್ಧಶತಕ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡವು 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ.
ಆರ್‌ಸಿಬಿ ವಿರುದ್ಧ ಗೆಲುವು ದಾಖಲಿಸುವ ಮೂಲಕ ತಾವಾಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು ಆರ್‌ಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಇಲ್ಲಿನ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ರಾಯಲ್ಸ್ ತಂಡ 19.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 189 ರನ್ ಗಳಿಸಿ ಗೆದ್ದು ಬೀಗಿದೆ.
ಆರ್‌ಸಿಬಿ ಇನ್ನಿಂಗ್ಸ್: ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. ಕೊಹ್ಲಿ ಔಟಾಗದೆ 72 ಎಸೆತಗಳಲ್ಲಿ 12 ಬೌಂಡರಿ, 4 ಸಿಕ್ಸರ್ ಸಹಿತ 113 ರನ್ ಗಳಿಸಿ ಮಿಂಚಿದರೇ, ಫಾಫ್ 33 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಿತ 44 ರನ್ ಗಳಿಸಿ ಬೃಹತ್ ಮೊತ್ತ ಕೆಲಹಾಕುವ ಸೂಚನೆ ನೀಡಿದರು.
ಫಾಫ್ ಚಾಹಲ್‌ಗೆ ವಿಕೆಟ್ ಒಪ್ಪಿಸಿ ಹೊರ ನಡೆದರೇ, ಬಳಿಕ ಕ್ರೀಸ್‌ಗೆ ಬಂದ ಗ್ರೆನ್ ಮ್ಯಾಕ್ಸ್‌ವೆಲ್ ಕೇವಲ 1 ರನ್ ಗಳಿಸಿ ಬಂದ ದಾರಿಯಲ್ಲೇ ಹಿಂದಿರುಗಿದರು. ಉಳಿದಂತೆ ಸೌರವ್ ಚೌಹಾಣ್ 6 ರನ್ ಗಳಿಸಿದರೆ, ಕ್ಯಾಮರೂನ್ ಗ್ರೀನ್ ಔಟಾಗದೆ 5 ರನ್ ಗಳಿಸಿದರು.
ರಾಜಸ್ಥಾನದ ಪರ ಯಜುವೇಂದ್ರ ಚಾಹಲ್ 2, ಬರ್ಗರ್ 1 ವಿಕೆಟ್ ಪಡೆದರು.
ರಾಜಸ್ಥಾನ್ ಇನ್ನಿಂಗ್ಸ್: ತವರಿನಂಗಳದಲ್ಲಿ ಬೃಹತ್ ಮೊತ್ತ ಚೇಸ್ ಮಾಡಲು ಮುಂದಾದ ಆರ್‌ಆರ್‌ಗೆ ಆರಂಭಿಕ ಆಘಾತ ಉಂಟಾಯಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಸೊನ್ನೆ ಸುತ್ತಿ ಟಾಪ್ಲಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ನಾಯಕ ಸಂಜು ಸ್ಯಾಮ್ಸನ್, ಬಟ್ಲರ್ ಜೊತೆಗೂಡಿ ಭರ್ಜರಿ ಇನ್ನಿಂಗ್ಸ್ ಕಟ್ಟಿದರು. ನಾಯಕ ಸ್ಯಾಮ್ಸನ್ 42 ಎಸೆತ ಎದುರಿಸಿ 8ಬೌಂಡರಿ ಮತ್ತು 2 ಸಿಕ್ಸರ್ ಸಹಿತ 69 ರನ್ ಗಳಿಸಿ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಪರಾಗ್ 4, ಜುರೆಲ್ 2 ರನ್ ಗಳಿಸಿ ಬೇಗನೇ ಪೆವಿಲಿಯನ್ ಸೇರಿದರು.
ಒಂದೆಡೆ ವಿಕೆಟ್ ಬೀಳುತ್ತಿದ್ದರು ಮತ್ತೊಂದೆಡೆ ನೆಲಕಚ್ಚಿ ಆಡಿದ ಜಾಸ್ ಬಟ್ಲರ್ ಆರ್‌ಸಿಬಿಯಿಂದ ಮ್ಯಾಚ್ ಕಸಿದರು. ಅವರು ಓಟಾಗದೇ 58 ಎಸೆತಗಳಲ್ಲಿ 9ಬೌಂಡರಿ, 4ಸಿಕ್ಸರ್ ಸಹಿತ 100 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇವರಿಗೆ ಹೆಟ್ಮಾಯರ್ 11 ರನ್ ಗಳಿಸಿ ಸಾಥ್ ನೀಡಿದರು.
ಆರ್‌ಸಿಬಿ ಪರ ಟಾಪ್ಲಿ 2, ಯಶ್ ದಯಾಳ್ ಮತ್ತು ಸಿರಾಜ್ ತಲಾ ಒಂದು ವಿಕೆಟ್ ಪಡೆದರು.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…