ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಈಗಾಗಲೇ ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ. ಭಾರತದ ಮಾಜಿ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಅಯೋಧ್ಯೆಯ ರಾಮಮಂದಿರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶನಿವಾರ ಆಹ್ವಾನ ನೀಡಲಾಗಿದೆ.
ನೀರಜ್ ಚೋಪ್ರಾ, ಪಿಪಿ ಸಿಂಧು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಇತರ ಖ್ಯಾತ ಕ್ರೀಡಾಪಟುಗಳು ಸೇರಿದ್ದಾರೆ. ಚಿತ್ರರಂಗದ ಸೆಲೆಬ್ರಿಟಿಗಳಾದ ಜಖಿ ಶ್ರಾಫ್, ರಜನಿಕಾಂತ್, ರಣಬೀರ್ ಕಪೂರ್ ಮತ್ತಿತರರಿಗೂ ಆಹ್ವಾನ ನೀಡಲಾಗಿದೆ.
ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಕೇವಲ 9 ದಿನಗಳು ಉಳಿದಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ವಿಶೇಷ ಅತಿಥಿಗಳಿಗೆ ಉಡುಗೊರೆಗಳನ್ನು ಒಳಗೊಂಡಂತೆ ಅವರಿಗೆ ಬೇಕಾದ ಸಕಲ ವ್ಯವಸ್ಥೆಯನ್ನು ಟ್ರಸ್ಟ್ ಮಾಡುತ್ತಿದೆ. ವಿಶೇಷ ಅತಿಥಿಗಳಿಗೆ ನೀಡಲಾಗುವ ಉಡುಗೊರೆಗಳು ರಾಮ್‌ರಾಜ್ ವಸ್ತ್ರವನ್ನು ಒಳಗೊಂಡಿದೆ. ಅಲ್ಲದೇ ಕಾರ್ಯಕ್ರಮದ ಅಂಗವಾಗಿ ಸಮಾರಂಭದ ದಿನದಂದು ಅತಿಥಿಗಳಿಗೆ ವಿಶೇಷವಾಗಿ ತಯಾರಿಸಲಾಗುವ ಮೋತಿಚೂರು ಲಡ್ಡನ್ನು ಪ್ರಸಾದವಾಗಿ ವಿತರಿಸಲಾಗುತ್ತದೆ.
ಜನವರಿ 22ರಂದು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ನೇತೃತ್ವ ವಹಿಸಲಿದ್ದಾರೆ ಮತ್ತು ಜಟಾಯು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…
ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…
ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…