ಕ್ರೀಡೆ

ರಣಜಿ ಟ್ರೋಫಿ 2025: ಪಂಜಾಬ್‌ ವಿರುದ್ಧ ಗೆದ್ದು ಬೀಗಿದ ಕರ್ನಾಟಕ

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಟೂರ್ನಿಯ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಭರ್ಜರಿ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕರ್ನಾಟಕದ ನಾಯಕ ಮಯಾಂಕ್‌ ಅಗರ್‌ವಾಲ್‌ ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. ಇದಕ್ಕೆ ತಕ್ಕಂತೆ ಬೌಲಿಂಗ್‌ ಮಾಡಿದ ಬೌಲರ್‌ಗಳು ಪಂಜಾಬ್‌ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 55 ರನ್‌ಗಳಿಗೆ ಆಲೌಟ್‌ ಮಾಡಿದರು. ತಂಡದ ಪರ ವಾಸುಕಿ ಕೌಶಿಕ್‌ 4 ವಿಕೆಟ್‌ ಪಡೆದರೆ, ಅಭಿಲಾಷ್‌ ಶೆಟ್ಟಿ 3 ವಿಕೆಟ್‌ ಪಡೆದರು.

ಇದರ ಬೆನ್ನಲ್ಲೇ ಪ್ರಥಮ ಇನ್ನಿಂಗ್ಸ್‌ ಆರಂಭಿಸಿದ ಕರ್ನಾಟಕ ತಂಡ ಸ್ಮರಣ್‌ ರವಿಚಂದ್ರನ್‌ ಚೊಚ್ಚಲ ದ್ವಿಶತಕದ 203(277) ನೆರವಿನಿಂದ 475 ರನ್‌ಗಳ ಬೃಹತ್‌ ಮೊತ್ತ ಪೇರಿಸುವ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 320 ರನ್‌ಗಳ ಮುನ್ನಡೆ ಗಳಿಸಿತು.

ಇದಕ್ಕುತ್ತರವಾಗಿ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಂಜಾಬ್‌ ತಂಡ ನಾಯಕ ಶುಭಮನ್‌ ಗಿಲ್‌ 102(171) ಶತಕದ ಹೋರಾಟದ ನಡುವೆ 63.4 ಓವರ್‌ಗಳಲ್ಲಿ 213 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಸೋಲನ್ನು ಕಂಡಿತು.

ಕರ್ನಾಟಕದ ಪರ ಯಶೋವರ್ಧನ್‌ ಹಾಗೂ ಶ್ರೇಯಸ್‌ ಗೋಪಾಲ್‌ ತಲಾ 3 ವಿಕೆಟ್‌ ಪಡೆದರೆ, ಪ್ರಸಿದ್ಧ ಕೃಷ್ಣ 2 ವಿಕೆಟ್‌ಗಳಿಸಿ ಮಿಂಚಿದರು.

ಈ ಗೆಲುವಿನೊಂದಿಗೆ ಎಲೈಟ್‌ ʼಸಿʼ ಗುಂಪಿನಲ್ಲಿ ಆಡಿರುವ 6 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿರುವ ಕರ್ನಾಟಕ ತಂಡ 19 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

38 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

2 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

3 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

3 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago