ಕ್ರೀಡೆ

ರಣಜಿ ಟ್ರೋಫಿ: 3ನೇ ಬಾರಿ ಚಾಂಪಿಯನ್‌ ಆದ ವಿದರ್ಭ

ನಾಗ್ಪುರ: ದೇಶೀಯ ಕ್ರಿಕೆಟ್‌ ರಣಜಿ ಟ್ರೋಫಿಯಲ್ಲಿ ವಿದರ್ಭ ಸತತ ಮೂರನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ನಾಗ್ಪುರ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಕೇರಳ ಮತ್ತು ವಿದರ್ಭ ನಡುವಣ ಫೈನಲ್ಸ್‌ ಪಂದ್ಯದಲ್ಲಿ ಡ್ರಾ ಸಾಧಸಿದರೂ ಮೊದಲ ಇನ್ನಿಂಗ್ಸ್‌ ಮುನ್ನಡೆಯ ಕಾರಣ ವಿದರ್ಭ ಚಾಂಪಿಯನ್‌ ಆಗಿದೆ.

ರಣಜಿ ಕ್ರಿಕೆಟ್‌ನಲ್ಲಿ ಇದೆ ಮೊದಲ ಬಾರಿಗೆ ಫೈನಲ್ಸ್‌ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಕೇರಳದ ಕನಸು ನುಚ್ಚುನೂರಾಗಿದೆ.

ಟಾಸ್‌ ಗೆದ್ದ ಕೇರಳ ತಂಡ ಬೌಲಿಂಗ್‌ ಆಯ್ಕೆ ಮಾಡಿ, ವಿರೋಧ ತಂಡ ವಿದರ್ಭವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ವಿದರ್ಭ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 379 ರನ್‌ ಕಲೆಹಾಕಿ ಸರ್ವಪತನ ಕಂಡಿತ್ತು. ನಂತರ ಕೇರಳ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 342 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 37 ರನ್‌ ಹಿನ್ನಡೆ ಅನುಭವಿಸಿತ್ತು.

ವಿದರ್ಭ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 375 ರನ್‌ ಗಳಿಸಿತು. ಈ ಸಂದರ್ಭದಲ್ಲಿ ಫಲಿತಾಂಶ ದೊರಕದ ಹಿನ್ನಲೆಯಲ್ಲಿ ಡ್ರಾ ಎಂದು ಘೋಷಣೆ ಮಾಡಿದರು. ಈ ವೇಳೆ ಮೊದಲ ಇನ್ನಿಂಗ್ಸ್‌ ಮುನ್ನಡೆ ಕಾಯ್ದುಕೊಂಡ ವಿದರ್ಭವನ್ನು ಚಾಂಪಿಯನ್‌ ಎಂದು ಘೋಷಿಸಲಾಯಿತು. ಇದರೊಂದಿಗೆ ಚೊಚ್ಚಲ ಟ್ರೋಫಿ ಕನಸು ಕಂಡಿದ್ದ ಕೇರಳಕ್ಕೆ ನಿರಾಸೆ ಉಂಟಾಯಿತು.

ಈ ಹಿಂದೆ ವಿದರ್ಭ ತಂಡ 2017-18 ಮತ್ತು 2018-19 ರಲ್ಲಿ ರಣಜಿ ಟ್ರೋಫಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

6 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

6 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

7 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

7 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

7 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

7 hours ago