ಕ್ರೀಡೆ

ರಣಜಿ ಟ್ರೋಫಿ 2025: ಕರ್ನಾಟಕ ತಂಡದ ಪರ ಕಣಕ್ಕಿಳಿದ ಕೆ.ಎಲ್‌. ರಾಹುಲ್‌

ಬೆಂಗಳೂರು: ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ನಿರ್ಣಾಯಕ ಹಂತದಲ್ಲಿರುವ ಕರ್ನಾಟಕ ತಂಡದ ಪರ ರಾಷ್ಟ್ರೀಯ ತಂಡದ ಪರ ಆಡುವ ಪ್ರಮುಖ ಬ್ಯಾಟರ್‌ ಕೆ.ಎಲ್‌.ರಾಹುಲ್‌ ಕಣಕ್ಕಿಳಿದಿದ್ದಾರೆ.

ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹರಿಯಾಣ ತಂಡದ ವಿರುದ್ಧ ಕರ್ನಾಟಕ ತಂಡ ಆಡಲಿದ್ದು, ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲುವುದು ಮುಖ್ಯವಾಗಿದೆ.

ʼಸಿʼ ಗುಂಪಿನಲ್ಲಿರುವ ಎರಡು ತಂಡಗಳು, ಆಡಿರುವ ಆರು ಪಂದ್ಯಗಳಲ್ಲಿ ಒಂದರಲ್ಲೂ ಸೋತಿಲ್ಲ. ಹರಿಯಾಣ ತಲಾ ಮೂರು ಜಯ ಹಾಗೂ ಡ್ರಾನೊಂದಿಗೆ 26 ಪಾಯಿಂಟ್‌ ಹೊಂದಿದ್ದೂ, ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದೆ. ಆದರೆ, ಕರ್ನಾಟಕ ತಂಡ 19 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕರ್ನಾಟಕ ಮುಂದಿನ ಸುತ್ತು ಪ್ರವೇಶಿಸಬೇಕೆಂದರೆ ಹರಿಯಾಣ ವಿರುದ್ಧದ ಪಂದ್ಯ ಮಹತ್ವದ್ದಾಗಿದೆ. ಇಲ್ಲಿ ಗೆದ್ದರೂ, ಕೇರಳ-ಬಿಹಾರ ಪಂದ್ಯದ ಫಲಿತಾಂಶವೂ ಮುಖ್ಯವಾಗಲಿದೆ.

ಪ್ರಮುಖ ಟೂರ್ನಿಗಳ ವೈಫಲ್ಯದ ನಂತರ ದೇಶಿ ಕ್ರಿಕೆಟ್‌ನಲ್ಲಿ ಭಾರತ ತಂಡದ ಆಟಗಾರರು ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ನಿಯಮಗಳನ್ನು ಜಾರಿ ಮಾಡಿತ್ತು. ಇದರನ್ವಯ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ರವೀಂದ್ರ ಜಡೇಜಾ, ಶುಭಮನ್‌ ಗಿಲ್‌, ಶ್ರೇಯಸ್‌ ಐಯ್ಯರ್‌ ರಣಜಿ ಟ್ರೋಫಿ ಟೂರ್ನಿಯಲ್ಲಿ ಅಡಿದ್ದರು.

ಈಗ ವಿರಾಟ್‌ ಕೊಹ್ಲಿ ದೆಹಲಿ ತಂಡದ ಪರವಾಗಿ ಹಾಗೂ ಕೆ.ಎಲ್‌ ರಾಹುಲ್‌ ಕರ್ನಾಟಕ ತಂಡದ ಪರ ಕಣಕ್ಕಿಳಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago