ಫೋರ್ಟ್ ಆಫ್ ಸ್ಪೇನ್ (ವೆಸ್ಟ್ ಇಂಡೀಸ್): ಕೆರಿಬಿಯನ್ ನಾಡಿನಲ್ಲಿ ತಮ್ಮ ಸ್ಪಿನ್ ಮೋಡಿ ಮುಂದುವರಿಸಿರುವ ಭಾರತ ತಂಡದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ನಾಲ್ಕನೇ ದಿನ ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ.
ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನಾಲ್ಕನೇ ದಿನದಾಟದಲ್ಲಿ ವಿಂಡೀಸ್ ನಾಯಕ ಕ್ರೇಗ್ ಬ್ರಾಥ್‌ವೆಟ್ ಹಾಗೂ ಡೆಬ್ಯೂಟೆಂಟ್ ಕಿರ್ಕ್ ಮೆಕೆಂಜಿ ವಿಕೆಟ್ ಕಬಳಿಸಿದ ಅಶ್ವಿನ್, ಈ ದೊಡ್ಡ ಸಾಧನೆ ಮಾಡಿದ್ದಾರೆ.
ದೀರ್ಘ ಸ್ವರೂಪದ ಕ್ರಿಕೆಟ್‌ನಲ್ಲಿ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ವೆಸ್ಟ್ ಇಂಡೀಸ್ ವಿರುದ್ಧ ಆಡಿರುವ 17 ಟೆಸ್ಟ್ ಪಂದ್ಯಗಳಿಂದ 75 ವಿಕೆಟ್ ಪಡೆದು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ದಾಖಲೆಯನ್ನು ಈ ಹಿಂದೆ ಬರೆದಿದ್ದರು. ಆದರೆ, ಇದೀಗ ತಮಿಳುನಾಡು ಮೂಲದ ಆಫ್ ಸ್ಪಿನ್ನರ್ ಆರ್ ಅಶ್ವಿನ್ 13 ಪಂದ್ಯಗಳಲ್ಲಿಯೇ 75 ವಿಕೆಟ್ ಕಬಳಿಸಿ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ. ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ 89 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ.
1. ಕಪಿಲ್ ದೇವ್-89 ವಿಕೆಟ್
2. ರವಿಚಂದ್ರನ್ ಅಶ್ವಿನ್-75 ವಿಕೆಟ್
3. ಅನಿಲ್ ಕುಂಬ್ಳೆ-74 ವಿಕೆಟ್
4. ಎಸ್.ವೆಂಕಟರಾಘವನ್- 68 ವಿಕೆಟ್
5. ಬಿ.ಎಸ್.ಚಂದ್ರಶೇಖರ್-65 ವಿಕೆಟ್
ಅನಿಲ್ ಕುಂಬ್ಳೆ ನಂತರ ಭಾರತ ತಂಡದಲ್ಲಿ ಸ್ಪಿನ್ ಬಲ ಹೆಚ್ಚಿಸಿರುವ ರವಿಚಂದ್ರನ್ ಅಶ್ವಿನ್ ವೆಸ್ಟ್ ಇಂಡೀಸ್ ಸರಣಿಯಲ್ಲಿ 15 ವಿಕೆಟ್ ಪಡೆದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎಂಬ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ 956 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದರೆ, ರವಿಚಂದ್ರನ್ ಅಶ್ವಿನ್ (712), ಟರ್ಬನೇಟರ್ ಹರ್ಭಜನ್ ಸಿಂಗ್ (711), ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ (687) ಹಾಗೂ ಮಾಜಿ ವೇಗಿ ಜಹೀರ್ ಖಾನ್ (610) ಅಗ್ರ 5ರಲ್ಲಿ ಸ್ಥಾನ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಭಾರತ ತಂಡ, ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 141 ರನ್ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಇದೀಗ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಲು ರೋಹಿತ್ ಶರ್ಮಾ ಪಡೆಗೆ ಇನ್ನೂ 8 ವಿಕೆಟ್ ಅಗತ್ಯವಿದೆ. ಈ ಪಂದ್ಯದಲ್ಲಿ ಭಾರತ ಗೆಲ್ಲಬೇಕೆಂದರೆ ಆರ್ ಅಶ್ವಿನ್ ನಿರ್ಣಾಯಕ ಪಾತ್ರ ವಹಿಸಬೇಕಾಗುತ್ತದೆ. 365 ಗುರಿ ಹಿಂಬಾಲಿಸಿರುವ ವೆಸ್ಟ್ ಇಂಡೀಸ್ 4ನೇ ದಿನದಾಟಕ್ಕೆ ಎರಡು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿದ್ದು, ಗೆಲುವಿಗೆ ಇನ್ನೂ 289 ರನ್ ಅಗತ್ಯವಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…