ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ಆಟಗಾರ ರವೀಂದ್ರ ಜಡೇಜಾ ಮುಂಬರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಸೌರಾಷ್ಟ್ರ ತಂಡದಲ್ಲಿ ಆಡಲಿದ್ದಾರೆ ಎಂದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಜಯದೇವ್ ಶಾ ತಿಳಿಸಿದ್ದಾರೆ.
ಇದೇ 23ರಂದು ಸೌರಾಷ್ಟ್ರ ತಂಡವು ದೆಹಲಿ ತಂಡದ ವಿರುದ್ಧ ಕಣಕ್ಕಿಳಿಯಲಿದ್ದು, ಜಡೇಜಾ ನೆಟ್ಸ್ ಅಭ್ಯಾಸದಲ್ಲಿ ತೊಡಗಿದ್ದಾರೆ. ಇದಕ್ಕೂ ಮುಂಚೆ 2023ರ ಜನವರಿಯಲ್ಲಿ ಕೊನೆಯ ಸಲ ರಣಜಿ ಪಂದ್ಯದಲ್ಲಿ ಆಡಿದ್ದರು.
ಈಚೆಗೆ ಆಸ್ಟ್ರೇಲಿಯಾದಲ್ಲಿ ಭಾರತ ತಂಡವು ಬಾರ್ಡರ್-ಗವಸ್ಕಾರ್ ಸರಣಿ ಸೋತ ನಂತರ ರಾಷ್ಟ್ರೀಯ ತಂಡದ ಆಟಗಾರರು ಬಿಡುವು ಇದ್ದಾಗ ದೇಶಿ ಕ್ರಿಕೆಟ್‌ನಲ್ಲಿ ಆಡಬೇಕು ಎಂದು ಬಿಸಿಸಿಐ ನಿಯಮ ರೂಪಿಸಿದೆ.