ಬೆಂಗಳೂರು: ಕೋಟ್ಯಾಂತರ ಅಭಿಮಾನಿಗಳ ಬೆಂಬಲ, ಹಾರೈಕೆ ಹಾಗೂ ಪ್ರಾರ್ಥನೆ ಕೊನೆಗೂ ಫಲಿಸಿದ್ದು, 18ನೇ ಪ್ರಯತ್ನದಲ್ಲಿ ಆರ್‌ಸಿಬಿ ತಂಡ ಟ್ರೋಫಿಗೆ ಮುತ್ತಿಟ್ಟಿದೆ.
ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.
ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ವಿಧಾನಸೌಧದರಿಂದ ಆರಂಭವಾಗಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಗಳಿವೆ.





